Hijab Row: ನೋ ಹಿಜಾಬ್, ನೋ ಶಾಲ್, ಹೀಗಿತ್ತು ಹೈಕೋರ್ಟ್ ವಿಚಾರಣೆ
ವಿವಾದಿತ ಹಿಜಾಬ್-ಕೇಸರಿ ವಸ್ತ್ರ ಪ್ರಕರಣದ ಬಗ್ಗೆ ತೀರ್ಪು ಪ್ರಕಟಿಸುವವರೆಗೂ ಹಿಜಾಬ್-ಕೇಸರಿ ವಸ್ತ್ರ ಸೇರಿದಂತೆ ಯಾವುದೇ ಧಾರ್ಮಿಕ ಉಡುಪು ಧರಿಸದೆ ಶಾಲಾ-ಕಾಲೇಜಿಗೆ ತೆರಳಬೇಕು. ಈ ವಿಚಾರದಲ್ಲಿ ಯಾರೂ ಒತ್ತಾಯ ಮಾಡುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡುವುದಾಗಿ ಹೈಕೋರ್ಟ್‌ನ ವಿಸ್ತೃತ ಪೀಠ ವಿಚಾರಣೆ ವೇಳೆ ತಿಳಿಸಿದೆ.
ಬೆಂಗಳೂರು (ಫೆ. 11): ವಿವಾದಿತ ಹಿಜಾಬ್-ಕೇಸರಿ ವಸ್ತ್ರ ಪ್ರಕರಣದ ಬಗ್ಗೆ ತೀರ್ಪು ಪ್ರಕಟಿಸುವವರೆಗೂ ಹಿಜಾಬ್-ಕೇಸರಿ ವಸ್ತ್ರ ಸೇರಿದಂತೆ ಯಾವುದೇ ಧಾರ್ಮಿಕ ಉಡುಪು ಧರಿಸದೆ ಶಾಲಾ-ಕಾಲೇಜಿಗೆ ತೆರಳಬೇಕು. ಈ ವಿಚಾರದಲ್ಲಿ ಯಾರೂ ಒತ್ತಾಯ ಮಾಡುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡುವುದಾಗಿ ಹೈಕೋರ್ಟ್‌ನ ವಿಸ್ತೃತ ಪೀಠ ವಿಚಾರಣೆ ವೇಳೆ ತಿಳಿಸಿದೆ.
Hijab Row: ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ
ಧಾರ್ಮಿಕ ಉಡುಪು ಧರಿಸಿ ಶಾಲಾ- ಕಾಲೇಜಿಗೆ ಬರುವಂತಿಲ್ಲ. ಈ ವಿಚಾರದಲ್ಲಿ ಯಾರಿಗೆ ಯಾರೂ ಒತ್ತಾಯ ಮಾಡುವಂತಿಲ್ಲ. ರಾಜ್ಯದಲ್ಲಿ ಮತ್ತೆ ಶಾಂತಿ- ನೆಮ್ಮದಿ ಪುನರ್ ಸ್ಥಾಪನೆಯಾಗಬೇಕು. ಪ್ರಕರಣ ಸಂಬಂಧ ನಿರ್ಧಾರ ಕೈಗೊಳ್ಳಲು ನಮಗೆ ಸಮಯ ಬೇಕು. ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ, ನ್ಯಾಯಾಲಯದೊಂದಿಗೆ ಸಹಕರಿಸಿ ಎಂದು ಹೈಕೋರ್ಟ್ ಹೇಳಿದೆ.