Flag Row: ಕಾಂಗ್ರೆಸ್ ನಾಯಕರು ಸುಮ್ಮನೆ ಸಮಯ ವ್ಯರ್ಥ ಮಾಡ್ತಿದ್ದಾರೆ: ಸುಧಾಕರ್

ಸದನದಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚಿಸಬೇಕಿತ್ತು. ಆದರೆ ಕಾಂಗ್ರೆಸ್ ನಾಯಕರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ಈಶ್ವರಪ್ಪ ಹೇಳಿಕೆಯನ್ನು ರಾಜಕೀಯ ಲಾಭಕ್ಕೋಸ್ಕರ ಕಲಾಪದ ಸಮಯ ಹಾಳು ಮಾಡಿದ್ದಾರೆ: ಆರೋಗ್ಯ ಸಚಿವ ಡಾ. ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದಾರೆ. 

First Published Feb 20, 2022, 5:13 PM IST | Last Updated Feb 20, 2022, 5:13 PM IST

ಬೆಂಗಳೂರು (ಫೆ. 20): ಸದನದಲ್ಲಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚಿಸಬೇಕಿತ್ತು. ಆದರೆ ಕಾಂಗ್ರೆಸ್ (Congress) ನಾಯಕರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ಈಶ್ವರಪ್ಪ (KS Eshwarappa) ಹೇಳಿಕೆಯನ್ನು ರಾಜಕೀಯ ಲಾಭಕ್ಕೋಸ್ಕರ ಕಲಾಪದ ಸಮಯ ಹಾಳು ಮಾಡಿದ್ದಾರೆ, ಇದು ಕಾಂಗ್ರೆಸ್ ಪಕ್ಷಕ್ಕೆ, ನಾಯಕರಿಗೆ ಶೋಭೆ ತರುವುದಿಲ್ಲ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್  (Dr Sudhakar) ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದಾರೆ. 

National Flag Row: ಸಚಿವ ಈಶ್ವರಪ್ಪ ಬೆನ್ನಿಗೆ ನಿಂತ ರೇಣುಕಾಚಾರ್ಯ

ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಕಳೆದ 4 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್‌ ತನ್ನ ಹೋರಾಟವನ್ನು ಸೋಮವಾರದಿಂದ ಸದನದ ಹೊರಗೂ ಒಯ್ಯಲು ತೀರ್ಮಾನಿಸಿದ್ದು, ರಾಜ್ಯದ ಪ್ರತಿ ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಹೋರಾಟ ನಡೆಸುವಂತೆ ತನ್ನ ಜಿಲ್ಲಾ ಕಾಂಗ್ರೆಸ್‌ ಸಮಿತಿ ಮತ್ತು ತಾಲ್ಲೂಕು ಕಾಂಗ್ರೆಸ್‌ ಘಟಕಗಳಿಗೆ ಸೂಚನೆ ನೀಡಿದೆ.

Video Top Stories