ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ; ಕರಾವಳಿ, ಮಲೆನಾಡು ಭಾಗಗಳಲ್ಲಿ ರೆಡ್ ಅಲರ್ಟ್..!
ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಮುಂದಿನ ಎರಡು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದ್ದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬೀಳುವ ನಿರೀಕ್ಷೆಯಿದೆ. ಹಾಗಾಗಿ 'ರೆಡ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು (ಸೆ. 21): ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ. ಮುಂದಿನ ಎರಡು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದ್ದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಬೀಳುವ ನಿರೀಕ್ಷೆಯಿದೆ. ಹಾಗಾಗಿ 'ರೆಡ್ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.
ಮುಂದಿನ ವಾರ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸೆ. 21 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.