Asianet Suvarna News Asianet Suvarna News

ಕೊರೋನಾ ನಿಯಂತ್ರಿಸಲು ಮತ್ತೆ ಕಠಿಣ ಕ್ರಮ: ಮೋದಿ ಕೈಯ್ಯಲ್ಲಿ ಭವಿಷ್ಯ!

ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲೂ ಬ್ರಿಟನ್ ವೈರಸ್ ಜೊತೆಗೆ ದಕ್ಷಿಣ ಆಫ್ರಿಕಾ ವೈರಸ್ ಕೂಡ ಕಾಣಿಸಿಕೊಂಡಿದ್ದು, ಕೊರೋನಾ ಸೋಂಕು ವೇಗವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಂದೆ ಮತ್ತೆ ಲಾಕ್​ಡೌನ್ ಮಾಡುವ ಬಗ್ಗೆಯೂ ಪ್ರಸ್ತಾಪ ಇರಿಸಲಾಗಿದೆ.

ಬೆಂಗಳೂರು(ಮಾ.16): ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕರ್ನಾಟಕದಲ್ಲೂ ಬ್ರಿಟನ್ ವೈರಸ್ ಜೊತೆಗೆ ದಕ್ಷಿಣ ಆಫ್ರಿಕಾ ವೈರಸ್ ಕೂಡ ಕಾಣಿಸಿಕೊಂಡಿದ್ದು, ಕೊರೋನಾ ಸೋಂಕು ವೇಗವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಂದೆ ಮತ್ತೆ ಲಾಕ್​ಡೌನ್ ಮಾಡುವ ಬಗ್ಗೆಯೂ ಪ್ರಸ್ತಾಪ ಇರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಸುಧಾಕರ್, ಕೊರೋನಾ ಲಸಿಕೆ ವಿತರಣೆ ಬೇಗ ಜಾಸ್ತಿ ಆಗಿದೆ. ಇದುವರೆಗೂ 15 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಿದ್ದೇವೆ. ಕೊರೋನಾ ನಿಯಂತ್ರಣಕ್ಕೆ ಯಾವ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿದ ಬಳಿಕ ಸಿಎಂ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.