
Transformer Blast: ಬೇಜವಾಬ್ದಾರಿ ಬೆಸ್ಕಾಂ ವಿರುದ್ಧ ಆಕ್ರೋಶ, ಉಲ್ಲಾಳದಲ್ಲಿ ಬಿಗುವಿನ ವಾತಾವರಣ
ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ - ಮಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್ ಸಮೀಪ ನಡೆದಿದೆ.
ಬೆಂಗಳೂರು (ಮಾ. 24): ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಸ್ಕೂಟರ್‌ನಲ್ಲಿ ಹೋಗುತ್ತಿದ್ದವರಿಗೆ ಬೆಂಕಿ ತಾಕಿದ ಪರಿಣಾಮ ತಂದೆ - ಮಗಳು ಮೃತಪಟ್ಟಿರುವ ದಾರುಣ ಘಟನೆ ನಗರದ ಉಲ್ಲಾಳ ಬಳಿಯ ಮಂಗನಹಳ್ಳಿ ಕ್ರಾಸ್ ಸಮೀಪ ನಡೆದಿದೆ.
ಟ್ರಾನ್ಸ್‌ಫಾರ್ಮರ್ ಸ್ಪೋಟಕ್ಕೆ ತಂದೆ- ಮಗಳು ಬಲಿ, ಹಸೆಮಣೆ ಏರಬೇಕಾದ ಯುವತಿ ಮಸಣಕ್ಕೆ
ಮಂಗನಹಳ್ಳಿ ನಿವಾಸಿ ಶಿವರಾಜ್(55), ಪುತ್ರಿ ಚೈತನ್ಯ(19) ಮೃತ ದುರ್ದೈವಿ. ನಿಶ್ಚಿತಾರ್ಥಕ್ಕೆ ಕಲ್ಯಾಣ ಮಂಟಪ ಬುಕ್ ಮಾಡಿ ಮಗಳ ಜತೆ ಶಿವರಾಜ್ ಮನೆಗೆ ಮರಳುವಾಗ ಈ ಘಟನೆ ನಡೆದಿದೆ. ಟ್ರಾನ್ಸ್‌ಫಾರ್ಮರ್ ಕೆಟ್ಟು ಹೋಗಿರುವ ಬಗ್ಗೆ ಸ್ಥಳೀಯರು ಈ ಮೊದಲೇ ಬೆಸ್ಕಾಂಗೆ ದೂರು ನೀಡಿದ್ದರು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಮೃತದೇಹ ಹೊತ್ತು ತಂದ ಆಂಬುಲೆನ್ಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಬರುವಂತೆ ಪಟ್ಟು ಹಿಡಿದಿದ್ದಾರೆ. ಸಚಿವ ಸೋಮಶೇಖರ್ ಸಾರ್ವಜನಿಕರ ಮನವೊಲಿಸಿದ್ದಾರೆ. ಮೃತರ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರವನ್ನೂ ಘೋಷಿಸಿದ್ದಾರೆ.