Tumakuru Bus Accident: ಓವರ್ ಲೋಡ್, ಅತೀ ವೇಗದ ಚಾಲನೆಯೇ ದುರಂತಕ್ಕೆ ಕಾರಣ.?
ಪಾವಗಢ ಬಸ್ ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈವರೆಗೂ 8 ಮಂದಿಯ ಮೃತರ ಹೆಸರು ಪತ್ತೆಯಾಗಿದೆ. ಮೃತರಲ್ಲಿ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿದೆ. ಅತೀ ವೇಗದ ಚಾಲನೆ, ಓವರ್‌ಲೋಡ್ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.
ತುಮಕೂರು (ಮಾ. 19): ಪಾವಗಢ ಬಸ್ ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈವರೆಗೂ 8 ಮಂದಿಯ ಮೃತರ ಹೆಸರು ಪತ್ತೆಯಾಗಿದೆ. ಮೃತರಲ್ಲಿ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿದೆ. ಅತೀ ವೇಗದ ಚಾಲನೆ, ಓವರ್‌ಲೋಡ್ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಅಪಘಾತ ಸ್ಥಳಕ್ಕೆ ಸಚಿವ ನಾರಾಯಣ ಸ್ವಾಮಿ ಭೇಟಿ ನೀಡಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
Tumakuru: ಪಾವಗಢ ಬಸ್ ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಸಾವು..?
ಎಲ್ಲಾ ರಕ್ಷಣಾ ಕ್ರಮ ತೆಗೆದುಕೊಳ್ಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ' ಎಂದು ತುಮಕೂರು ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದಾರೆ.