ಇಂದು ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ 2ನೇ ಪುಣ್ಯಸ್ಮರಣೆ, ಮಠದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ
ಶಿವೈಕ್ಯ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸಂಸ್ಮರಣೋತ್ಸವ ಸಿದ್ಧಗಂಗೆಯಲ್ಲಿ ನೆರವೇರಿದೆ. ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾಭಿಷೇಕ ನೆರವೇರಿದೆ.
ಬೆಂಗಳೂರು (ಜ. 21): ಶಿವೈಕ್ಯ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸಂಸ್ಮರಣೋತ್ಸವ ಸಿದ್ಧಗಂಗೆಯಲ್ಲಿ ನೆರವೇರಿದೆ. ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾಭಿಷೇಕ ನೆರವೇರಿದೆ. ಕೇಂದ್ರ ಸಚಿವ ಪ್ರತಾಪಚಂದ್ರ ಸಾರಂಗಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು, ನಾಡಿನ ವಿವಿಧ ಭಾಗಗಳಿಂದ 25 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ನಾಡಿನ ವಿವಿಧ ಮಠಾಧೀಶರು ಮತ್ತು ಜನಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಯಡಿಯೂರಪ್ಪನವರು ಶಿವೈಕ್ಯ ಶ್ರೀಗಳ ಗದ್ದುಗೆ ದರ್ಶನ ಮಾಡಲಿದ್ದಾರೆ.
ತವರು ಜಿಲ್ಲೆ ದೇಗುಲಗಳಿಗೆ ಕೋಟಿ ಕೋಟಿ ಅನುದಾನ, ಬೇರೆ ಜಿಲ್ಲೆಗಳ ದೇವರಿಗೆ 'ಪೂಜಾರಿ'ತಾರತಮ್ಯ..!