Asianet Suvarna News Asianet Suvarna News

ಕೊರೋನಾ ಸೋಂಕಿನಿಂದ ಡಾ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ನಿಧನ

Sep 26, 2021, 10:21 AM IST

ಬೆಂಗಳೂರು (ಸೆ. 26): ಕೊರೋನಾ ಸೋಂಕಿನಿಂದ ಚಿಕ್ಕನಾಯಕನಹಳ್ಳಿ ಕುಪ್ಪೂರು ಮಠದ ಡಾ. ಯಥೀಶ್ವರ ಶಿವಾಚಾರ್ಯ ಸ್ವಾಮೀಜಿ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಶ್ರೀಗಳನ್ನು ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಭಾರತ್ ಬಂದ್‌ಗೆ ಬೆಂಬಲ ಇಲ್ಲ, ಮಲ್ಲೇಶ್ವರಂ ಟ್ರೇಡರ್ಸ್ ಅಸೋಸಿಯೇಷನ್ ಸ್ಪಷ್ಟನೆ

ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆ ತರುವಾಗ ಮಾರ್ಗಮಧ್ಯೆ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಕುಪ್ಪೂರು ಮಠದಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ.