ಏ.1ರಂದು ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನ, ಅಮಿತ್ ಷಾ ಮುಖ್ಯ ಅತಿಥಿ!

ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನಸಿದ್ಧಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಕೇಂದ್ರ ಗೃಹ ಸಚಿವಸುಮಾರು 2 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ

Share this Video
  • FB
  • Linkdin
  • Whatsapp

ಬೆಂಗಳೂರು (ಮಾ. 26): ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ (Shivakumara Swamiji)115ನೇ ಜನ್ಮದಿನ ಏಪ್ರಿಲ್ 1 ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ. ಸಿದ್ಧಗಂಗಾ ಮಠದಲ್ಲಿ(Siddaganga Mutt) ಅಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah)ಪಾಲ್ಗೊಳ್ಳಲಿದ್ದು, ಅಂದಾಜು 2 ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿದ್ಧಗಂಗಾ ಮಠದಲ್ಲಿ ಶನಿವಾರ ಬಿಜೆಪಿಯ ಉಪಾಧ್ಯಕ್ಷ ವಿಜೇಯೇಂದ್ರ ಈ ಮಾಹಿತಿ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ವೇದಿಕೆಗೆ ನಡೆದಾಡುವ ಬಸವಭಾರತ ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

Raita Ratna Award 2022 ಬಂಡೆ ಮೇಲೆ ಬತ್ತ ಬೆಳೆದ ಸಾಧಕ ಅರುಣ್‌ ಕುಮಾರ್‌

ಮಕ್ಕಳಿಗೆ ವಿದ್ಯೆ, ಅನ್ನ, ವಸತಿ ನೀಡುವ ಮೂಲಕವೇ ಇಡೀ ಭಾರತದಾದ್ಯಂತ ಮನೆಮಾತಾಗಿದ್ದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಕಾರ್ಯಕ್ರಮದಲ್ಲಿರಲಿದ್ದಾರೆ.

Related Video