Asianet Suvarna News Asianet Suvarna News

ಉಡುಪಿ ಕಾಲೇಜು ವಿಡಿಯೋ ವಿವಾದ: ಸಣ್ಣ ಘಟನೆ, ರಾಜಕೀಯ ಬಣ್ಣ ಯಾಕೆ ಎಂದ ಗೃಹ ಸಚಿವ ಪರಮೇಶ್ವರ್‌

ಉಡುಪಿ ಕಾಲೇಜು ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ವಿವಾದ ಸಣ್ಣ ಘಟನೆ, ಇದಕ್ಕೆ ರಾಜಕೀಯ ಬಣ್ಣ ಕೊಡುವುದು ಯಾಕೆ ಎಂದು ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ.

ಉಡುಪಿ ಕಾಲೇಜು ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ವಿವಾದ ಸದ್ದು ಮಾಡುತ್ತಿದ್ದು, ವಿಡಿಯೋ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆಗ್ರಹ ವ್ಯಕ್ತವಾಗುತ್ತಿದೆ. ವಿಡಿಯೋ ಮಾಡಿದ್ದ ಮೂವರು ಮುಸ್ಲಿಂ ವಿದ್ಯಾರ್ತಿನಿಯರ ವಿರುದ್ಧ ಎಫ್‌ಐಆರ್‌ ಸಹ ದಾಖಲಾಗಿದೆ. ಆದರೆ, ಇದೊಂದು ಸಣ್ಣ ಘಟನೆ, ಇದಕ್ಕೆ ರಾಜಕೀಯ ಬಣ್ಣ ಕೊಡುವುದು ಯಾಕೆ ಎಂದು ಗೃಹ ಸಚಿವ ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ. ಪ್ರಿನ್ಸಿಪಾಲ್‌ ಇದ್ದಾರೆ, ಕಾಲೇಜು ಸಮಿತಿ ಕ್ರಮ ಕೈಗೊಳ್ಳಲಿದೆ ಎಂದೂ ಹೇಳಿದ್ದಾರೆ.