ಬೆಂಗಳೂರು ರಣಮಳೆ ನಡುವೆ ಕುಸಿದ ಕಟ್ಟಡ, ಅವಶೇಷದಡಿ ಸಿಲುಕಿರುವ ಕಾರ್ಮಿಕರು!

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, ಮಳೆಗೆ ನಗರದ ಹಲವು ಬಡಾವಣೆ ಮುಳುಗಡೆ, ಸಿಪಿ ಯೋಗೇಶ್ವರ್ ಮುಂದಿನ ಆಯ್ಕೆ ಏನು? ಚನ್ನಪಟ್ಟಣದ ಲೆಕ್ಕಾಚಾರ ಉಲ್ಟಾ, ವಿಮ್ಸ್ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಸ್ಕ್ಯಾನಿಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

Share this Video
  • FB
  • Linkdin
  • Whatsapp

ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತಗೊಂಡು ಭಾರಿ ಅವಘಡ ಸಂಭವಿಸಿದೆ. ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿದ್ದ 14 ಕಾರ್ಮಿಕರ ರಕ್ಷಣೆ ಮಾಡಲಾಗಿದೆ. ಬಿಹಾರ ಮೂಲದ ಓರ್ವ ಕಾರ್ಮಿ ಮೃತಪಟ್ಟಿದ್ದರೆ, ಇನ್ನು 16 ಮಂದಿ ಅವಶೇಷದಡಿ ಸಿಲುಕಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ವೆಚ್ಚ ಸರ್ಕಾರ ಭರಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಇನ್ನು ಮೃತ ಕಾರ್ಮಿಕನ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿದೆ ಎಂದು ಭರವಸೆ ನೀಡಿದೆ.

Related Video