Asianet Suvarna News Asianet Suvarna News

ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸಲು ಮುಂದಾದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಕೇಂದ್ರ ಐಟಿ-ಬಿಟಿ ಸಚಿವ ರಾಜೀವ್ ಚಂದ್ರಶೇಖರ್, ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ 2024ರೊಳಗೆ ಭಾರತ್ ನೆಟ್‌ ಯೋಜನೆ ಜಾರಿ ಮಾಡುವ ಬಗ್ಗೆ ತಿಳಿಸಿದ್ದಾರೆ.

ಶಿವಮೊಗ್ಗ, (ಆ.17): ಕಾಲೇಜುಗಳು ಆನ್‌ಲೈನ್‌ನಲ್ಲಿ ಪಾಠ ಶುರುಮಾಡಿವೆ. ಜತೆಗೆ ಸರಕಾರಿ ಶಾಲೆ ಕಾಲೇಜುಗಳೂ ಈ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿವೆ. ಆದರೆ ನೆಟ್‌ವರ್ಕ್ ಸಮಸ್ಯೆ ವಿದ್ಯಾರ್ಥಿಗಳು ಹೈರಾಣಾಗುತ್ತಿದ್ದು, ಬೆಟ್ಟ-ಗುಡ್ಡ, ನದಿ ತಟಗಳಿಗೆ ಅಲೆಯುವಂತಾಗಿದೆ.

ಐಟಿ- ಬಿಟಿ ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ನನ್ನ ಮೊದಲ ಆದ್ಯತೆ: ರಾಜೀವ್ ಚಂದ್ರಶೇಖರ್

ಇದನ್ನ ಅರಿತ ಕೇಂದ್ರ ಐಟಿ-ಬಿಟಿ ಸಚಿವ ರಾಜೀವ್ ಚಂದ್ರಶೇಖರ್, ಹಳ್ಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ 2024ರೊಳಗೆ ಭಾರತ್ ನೆಟ್‌ ಯೋಜನೆ ಜಾರಿ ಮಾಡುವ ಬಗ್ಗೆ ತಿಳಿಸಿದ್ದಾರೆ.