ಭದ್ರಾವತಿಯಲ್ಲಿ ತಲೆ ಎತ್ತಲಿದೆ RAF ಘಟಕ: ದಿಲ್ಲಿಯಿಂದ ಬಂದು ಗುದ್ದಲಿ ಪೂಜೆ ನೆರವೇರಿಸಿದ ಶಾ

ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಅವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಶನಿವಾರ ಬೆಂಗಳೂರಿಗೆ ಆಗಮಿಸಿದರು.

First Published Jan 16, 2021, 6:22 PM IST | Last Updated Jan 16, 2021, 6:22 PM IST

ಶಿವಮೊಗ್ಗ, (ಜ.16): ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಅವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಶನಿವಾರ ಬೆಂಗಳೂರಿಗೆ ಆಗಮಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವಾಗತ: ವಿಶೇಷ ಉಡುಗೊರೆ ಕೊಟ್ಟ ಸಿಟಿ ರವಿ
 
ಇಂದು (ಶನಿವಾರ) ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಂಪು ಗುಲಾಬಿ ನೀಡಿ ಆತ್ಮೀಯವಾಗಿ ಬರಮಾಡಕೊಂಡರು. ಬಳಿಕ ಇಬ್ಬರೂ ಒಂದೇ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬುಳ್ಳಾಪುರಕ್ಕೆ ತೆರಳಿದರು. ಅಲ್ಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.