ಸಿಎಂ ಮನೆಯಲ್ಲಿ ಇಂದು ಅಮಿತ್ ಶಾ ಔತಣ ರಾಜಕೀಯ, ತೀವ್ರ ಕುತೂಹಲ

ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರಿ ನಿವಾಸದಲ್ಲಿ ನಡೆಸಲಿರುವ ‘ಭೋಜನ ಕೂಟ ರಾಜಕೀಯ’ ತೀವ್ರ ಕುತೂಹಲ ಮೂಡಿಸಿದೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 03): ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸರ್ಕಾರಿ ನಿವಾಸದಲ್ಲಿ ನಡೆಸಲಿರುವ ‘ಭೋಜನ ಕೂಟ ರಾಜಕೀಯ’ ತೀವ್ರ ಕುತೂಹಲ ಮೂಡಿಸಿದೆ.

ಅಮಿತ್ ಶಾ ರಾಜ್ಯ ಪ್ರವಾಸದಿಂದ ಬಿಜೆಪಿಯಲ್ಲಿ ಸಂಚಲನ: ಇಂದು ಸಂಜೆ ಮಹತ್ವದ ಸಭೆ

 ಅಮಿತ್‌ ಶಾ ಅವರ ಗೌರವಾರ್ಥ ಆಯೋಜಿಸಿರುವ ಭೋಜನ ಕೂಟದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಸಚಿವರು, ಪಕ್ಷದ ಸಂಸದರು, ಶಾಸಕರು ಹಾಗೂ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ನಾಯಕತ್ವ, ಸಂಪುಟ ಕಸರತ್ತು, ಮುಂಬರುವ ರಾಜ್ಯಸಭಾ ಮತ್ತು ವಿಧಾನಪರಿಷತ್‌ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಈ ಭೋಜನ ಕೂಟ ಹಾಗೂ ಅದರ ಬೆನ್ನಲ್ಲೇ ನಡೆಯುವ ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ, ರಾಜ್ಯ ಪದಾಧಿಕಾರಿಗಳ ಸಭೆಯ ಬಳಿಕ ಸ್ಪಷ್ಟಚಿತ್ರಣ ಹೊರಬೀಳಬಹುದು. ಮುಂಬರುವ ಚುನಾವಣೆ ದೃಷ್ಟಿಯಿಂದ ಸರ್ಕಾರ ಮತ್ತು ಪಕ್ಷದ ಸಂಘಟನೆ ಹೇಗಿರಬೇಕು ಎಂಬುದರ ಬಗ್ಗೆಯೂ ಅವರು ದಿಕ್ಸೂಚಿ ತೋರಬಹುದು. ಜತೆಗೆ ಹಲವು ಅನುಮಾನಗಳಿಗೆ ತೆರೆ ಎಳೆಯುವ ನಿರೀಕ್ಷೆಯಿದೆ.

Related Video