Karnataka Politics: ತಡರಾತ್ರಿ ಮೂರೂವರೆ ಗಂಟೆ ಸಿಎಂ ಬೊಮ್ಮಾಯಿ ಸೀಕ್ರೆಟ್ ಮೀಟಿಂಗ್..!
ಸಚಿವ ಸಂಪುಟ ಪುನಾರಚನೆಯ ಕುರಿತಂತೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಮೂವರು ನಾಯಕ ಭೇಟಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಮುಂಬರುವ ದಿನಗಳಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಖಚಿತ ಎನ್ನುವ ಮಾತುಗಳು ಜೋರಾಗಿ ಕೇಳಿ ಬಂದಿವೆ. ಶೀಘ್ರವೇ ಹೊಸ ಅಧ್ಯಕ್ಷರ ಹೆಸರು ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಬೆಂಗಳೂರು(ಜ.20): ಕರ್ನಾಟಕ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai), ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್(Nalin Kumar Kateel) ಹಾಗೂ ಅರುಣ್ ಸಿಂಗ್ ಒಟ್ಟಾರೆ ಮೂರುವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ (Karnataka Politics) ಹೊಸ ಕುತೂಹಲ ಮೂಡಿಸಿದೆ. ಸದ್ಯಕ್ಕೆ ನಾನು ಯಾವುದೇ ಕಾರಣಕ್ಕೂ ಡೆಲ್ಲಿಗೆ ಹೋಗುವುದಿಲ್ಲ ಎಂದಿರುವ ಸಿಎಂ, ಸಭೆಯಲ್ಲಿ ಪಕ್ಷ ಸಂಘಟನೆಯ ಕುರಿತಂತೆ ಚರ್ಚೆಯಾಗಿರುವುದಾಗಿ ತಿಳಿಸಿದ್ದಾರೆ
ಸಚಿವ ಸಂಪುಟ ಪುನಾರಚನೆಯ ಕುರಿತಂತೆ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಮೂವರು ನಾಯಕ ಭೇಟಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಮುಂಬರುವ ದಿನಗಳಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಖಚಿತ ಎನ್ನುವ ಮಾತುಗಳು ಜೋರಾಗಿ ಕೇಳಿ ಬಂದಿವೆ. ಶೀಘ್ರವೇ ಹೊಸ ಅಧ್ಯಕ್ಷರ ಹೆಸರು ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
Cabinet Reshuffle: ಮಂತ್ರಿ ಸ್ಥಾನಕ್ಕೆ ರಾಜ್ಯ ಬಿಜೆಪಿ ಪಡಸಾಲೆಯಲ್ಲಿ ಲಾಬಿ ಬಲು ಜೋರು..!
ಇದೇ ಸಭೆಯಲ್ಲಿ ಮುಂಬರುವ ಬಿಬಿಎಂಪಿ ಚುನಾವಣೆಯ (BBMP Election) ಕುರಿತಂತೆ ಚರ್ಚೆ ನಡೆಸಲಾಗಿದೆ. ಇನ್ನು ವಾರ್ಡ್ ಮೀಸಲಾತಿಯ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದೇ ವೇಳೆ ಮುಖ್ಯಮಂತ್ರಿ ಸಚಿವ ಸಂಪುಟ ವಿಸ್ತರಣೆಯ ಕುರಿತಾದ ವದಂತಿಯನ್ನು ತಳ್ಳಿಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ