Mekedatu Project : ರಾಜ್ಯದ ಹಿತದೃಷ್ಟಿಯಿಂದ ಪಾದಯಾತ್ರೆ ಮಾಡ್ತೇವೆ ಎಂದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ
ಮೇಕೆದಾಟು ಯೋಜನೆ ಆಗ್ರಹಿಸಿ ಜ.9 ರಿಂದ ಕಾಂಗ್ರೆಸ್ ಪಾದಯಾತ್ರೆ
ಇದು ಅಪ್ಪಟವಾಗಿ ಕುಡಿಯುವ ನೀರಿನ ಯೋಜನೆ
ರಾಜಕೀಯ ಕಾರಣಗಳಿಗಾಗಿ ತಮಿಳುನಾಡಿನಿಂದ ವಿರೋಧ
ಬೆಂಗಳೂರು (ಡಿ. 30): ಮೇಕೆದಾಟು ಯೋಜನೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಜನವರಿ 9 ರಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮೇಕೆದಾಟು ಯೋಜನೆ ಅಪ್ಪಟ ಕುಡಿಯುವ ನೀರಿನ ಯೋಜನೆ ಅದರೊಂದಿಗೆ ವಿದ್ಯುತ್ ಉತ್ಪಾದನೆ ಮಾಡುವ ಯೋಚನೆಯೂ ಇದೆ. ವಿಶೇಷವಾಗಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸಿಕೊಡುವುದು ಮೂಲ ಉದ್ದೇಶ ಎಂದರು. ಇಂದು ಬೆಂಗಳೂರಿನಲ್ಲಿ ಶೇ. 30ರಷ್ಟು ಜನರಿಗೆ ಕಾವೇರಿ ನೀರು ಸಿಗುವುದಿಲ್ಲ. ಈ ಯೋಜನೆಯ ಬಗ್ಗೆ ಸಂಪೂರ್ಣ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದೇವೆ. ಇದಕ್ಕೆ ಅವರಿಂದ ಒಪ್ಪಿಗೆ ಬೇಕಿದೆ. ಒಟ್ಟಾರೆ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಿದರು.
Mekedatu Padayatre: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಡಿ.ಕೆ.ಶಿವಕುಮಾರ್ ಭೇಟಿ
ಈ ಯೋಜನೆಯಿಂದಾಗಿ ಮಳೆ ಕಡಿಮೆ ಇದ್ದಂಥ ವರ್ಷಗಳಲ್ಲಿ ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕೊಡಬೇಕಾದಂಥ ನೀರನ್ನು ಮಳೆಗಾಲದಲ್ಲಿ ಶೇಖರಣೆ ಮಾಡಿ ಕೊಡಲು ಇದರಿಂದ ಸಾಧ್ಯವಾಗುತ್ತದೆ. ತಮಿಳುನಾಡಿಗೆ ಒಂಚೂರು ಹಾನಿ ಇದರಿಂದ ಆಗುವುದಿಲ್ಲ. ಇದು ಅವರಿಗೂ ಲಾಭ ತರುವ ಯೋಜನೆ. ಆದರೆ, ರಾಜಕೀಯ ಕಾರಣಗಳಿಗಾಗಿ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.