ಜನತಾ ಕರ್ಫ್ಯೂನಿಂದ ತಗ್ಗದ ಸೋಂಕು, 2 ವಾರ ರಾಜ್ಯದಲ್ಲಿ ಲಾಕ್‌ಡೌನ್ ಪಕ್ಕಾ.?

ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 07): ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ. ಈಗಿರುವ ಜನತಾ ಕರ್ಫ್ಯೂ ಪರಿಣಾಮಕಾರಿಯಾಗಿ ಜಾರಿಗೆ ಬಂದಿದ್ದರೆ ಲಾಕ್‌ಡೌನ್‌ ವಿಧಿಸುವ ಅಗತ್ಯ ಬೀಳುತ್ತಿರಲಿಲ್ಲ.

ಹೆಚ್ಚಿದ ಒತ್ತಡ: 14 ದಿನ ಲಾಕ್‌ಡೌನ್ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ಈಗಾಗಲೇ ಸೋಂಕಿತರಿಂದಾಗಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಿದೆ. ಬೆಡ್‌ಗಳು ಸಿಗುತ್ತಿಲ್ಲ. ಆಕ್ಸಿಜನ್‌ ಕೊರತೆಯಾಗಿದೆ. ಪರಿಸ್ಥಿತಿ ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರೆದರೆ ಇಡೀ ಆರೋಗ್ಯ ವ್ಯವಸ್ಥೆಯೇ ಕುಸಿದು ಹೋಗಲಿದೆ ಎಂಬ ಆತಂಕ ಉಂಟಾಗಿದೆ. ಈ ಕಾರಣಕ್ಕಾಗಿಯೇ ಲಾಕ್‌ಡೌನ್‌ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. 

Related Video