Asianet Suvarna News

ಮೇಕೆದಾಟು ವಿವಾದ: ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಗೃಹ ಸಚಿವರು

Jun 18, 2021, 2:43 PM IST

ಬೆಂಗಳೂರು (ಜೂ. 18): ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆ ವಿರುದ್ಧ ತಮಿಳುನಾಡು ಕೇಂದ್ರಕ್ಕೆ ದೂರು ಸಲ್ಲಿಸಿದೆ. 

ನಾಯಕತ್ವ ಬದಲಾವಣೆ: ಹಳೇ 'ಹುಲಿ'ನಾ..? ಹೊಸ 'ಕಲಿ'ನಾ.? ಅಂತಿಮ ವಿಜಯ ಯಾರದ್ದು..?

ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಅನುಮತಿ ನೀಡಬಾರದೆಂದು ತಮಿಳುನಾಡು ಸಿಎಂ ಸ್ಟ್ಯಾಲಿನ್ ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 'ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ನಾವು ಸದಾ ಮುಂದಿದ್ದೇವೆ. ನಿನ್ನೆ ಮೇಕೆದಾಟು ವಿಚಾರವಾಗಿ ದೆಹಲಿಯಲ್ಲಿ ಚರ್ಚೆ ನಡೆದಿದೆ. ನಾವು ಯಾವುದೇ ಉಲ್ಲಂಘನೆ ಮಾಡಿಲ್ಲ. ಹೀಗಾಗಿ ನಾವು ಗೆಲ್ಲುವ ವಿಶ್ವಾಸವಿದೆ' ಎಂದಿದ್ದಾರೆ.