ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆ..!
585 ಜನರ ಕೊರೋನಾ ರಿಪೋರ್ಟ್ ಹೊರಬಿದ್ದಿದ್ದು ಈ ಪೈಕಿ, 36 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಬೆಣ್ಣೆ ನಗರಿ ದಾವಣಗೆರೆಯಲ್ಲಿ ಮತ್ತೆ ಇಂದು ಹೊಸದಾಗಿ 5 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಚಿತ್ರದುರ್ಗದಲ್ಲಿ ಮೂರು ಕೋವಿಡ್ 19 ಪ್ರಕರಣಗಳು ದಾಖಲಾಗಿದೆ.
ಬೆಂಗಳೂರು(ಮೇ.09): ಆರೋಗ್ಯ ಇಲಾಖೆ ಇಂದು ಬೆಳಗ್ಗೆ ಬಿಡುಗಡೆ ಮಾಡಿದ ಮಾರ್ನಿಂಗ್ ಹೆಲ್ತ್ ಬುಲೆಟಿನ್‌ನಂತೆ ಇಂದು 36 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ.
585 ಜನರ ಕೊರೋನಾ ರಿಪೋರ್ಟ್ ಹೊರಬಿದ್ದಿದ್ದು ಈ ಪೈಕಿ, 36 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಬೆಣ್ಣೆ ನಗರಿ ದಾವಣಗೆರೆಯಲ್ಲಿ ಮತ್ತೆ ಇಂದು ಹೊಸದಾಗಿ 5 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಚಿತ್ರದುರ್ಗದಲ್ಲಿ ಮೂರು ಕೋವಿಡ್ 19 ಪ್ರಕರಣಗಳು ದಾಖಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೋನಾ ಸಮರಕ್ಕೆ ಸಜ್ಜಾಗಿ ಎಂದು ಕರೆಕೊಟ್ಟ ದಾವಣಗೆರೆ ಡಿಸಿ
ಇನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇಂದು ಮತ್ತೆ 7 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಇನ್ನು ಎಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.