Asianet Suvarna News Asianet Suvarna News

ಪ್ರಧಾನಿ ಮೋದಿ ಜನ್ಮ ದಿನ: ಕಾಂಗ್ರೆಸ್‌ನಿಂದ 'ನಿರುದ್ಯೋಗಿ ದಿನ' ಆಚರಣೆ

Sep 17, 2021, 4:40 PM IST

ಬೆಂಗಳೂರು (ಸೆ. 17): ಪ್ರಧಾನಿ ಮೋದಿ ಜನ್ಮ ದಿನವನ್ನು ಕಾಂಗ್ರೆಸ್ ನಿರುದ್ಯೋಗಿ ದಿನವನ್ನಾಗಿ ಆಚರಿಸಿತು. ಸಾವಿರಾರು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಮೋದಿ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು. 

ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಜಾಥ ಆಯೋಜಿಸಲಾಗಿತ್ತು.  ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ನಷ್ಟ ತಪ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.