ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡ ಪದಕ ಗೆಲ್ಲುವ ವಿಶ್ವಾಸವಿದೆ: ಮಾಜಿ ನಾಯಕ ವಿರೆನ್ ರಸ್ಕ್ಯುನಾ
ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡವು ಇತ್ತೀಚಿನ ಕೆಲ ವರ್ಷಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದು, ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ವಿಶ್ವಾಸವಿದೆ ಎಂದು ಭಾರತ ಹಾಕಿ ತಂಡದ ಮಾಜಿ ನಾಯಕ ವಿರೆನ್ ರಸ್ಕ್ಯುನಾ ಹೇಳಿದ್ದಾರೆ.
ನವದೆಹಲಿ(ಜು.19): ಬಹುನಿರೀಕ್ಷಿತ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜುಲೈ 23ರಿಂದ ಆರಂಭವಾಗಲಿದೆ. ಈ ಬಾರಿ ಭಾರತ ಪುರುಷ ಹಾಗೂ ಮಹಿಳಾ ಹಾಕಿ ತಂಡಗಳು ಟೋಕಿಯೋ ಒಲಿಂಪಿಕ್ಸ್‌ಗೆ ಅರ್ಹತೆಗಿಟ್ಟಿಸಿಕೊಂಡಿವೆ.
ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡವು ಇತ್ತೀಚಿನ ಕೆಲ ವರ್ಷಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದು, ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ವಿಶ್ವಾಸವಿದೆ ಎಂದು ಭಾರತ ಹಾಕಿ ತಂಡದ ಮಾಜಿ ನಾಯಕ ವಿರೆನ್ ರಸ್ಕ್ಯುನಾ ಹೇಳಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಏಕೈಕ ಭಾರತೀಯ ಅಭಿನವ್ ಬಿಂದ್ರಾ ಸಂದರ್ಶನ
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೊದಲ ವಾರ ಭಾರತೀಯರ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಲಿದೆ. ಮೊದಲ ವಾರದಲ್ಲಿ ಪದಕ ಗೆದ್ದರೆ, ಇನ್ನುಳಿದ ಅಥ್ಲೀಟ್‌ಗಳ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಲಿದೆ ಎಂದಿದ್ದಾರೆ. ಇದೇ ವೇಳೆ ಕೇವಲ 28ನೇ ವಯಸ್ಸಿಗೆ ಕ್ರೀಡಾ ವೃತ್ತಿಜೀವನಕ್ಕೆ ಗುಡ್‌ಬೈ ಹೇಳಿದ್ದೇಕೆ ಎನ್ನುವ ಗುಟ್ಟನ್ನು ರಸ್ಕ್ಯುನಾ ರಟ್ಟು ಮಾಡಿದ್ದಾರೆ. ವಿರೆನ್ ರಸ್ಕ್ಯುನಾ ಏಷ್ಯಾನೆಟ್ ನ್ಯೂಸ್‌ಗೆ ನೀಡಿದ ಸಂಪೂರ್ಣ ಸಂದರ್ಶನ ಇಲ್ಲಿದೆ ನೋಡಿ