Asianet Suvarna News Asianet Suvarna News

ಪ್ಯಾರಾಒಲಿಂಪಿಕ್ಸ್‌ನಲ್ಲಿ ಕನ್ನಡಿಗನ ಸಾಧನೆ, ಬೆಳ್ಳಿ ಗೆದ್ದ ಯತಿರಾಜ್!

Sep 5, 2021, 5:32 PM IST

ಬೆಂಗಳೂರು(ಸೆ.05): ಎಸ್‌ಎಲ್‌4 ವಿಭಾಗದಲ್ಲಿ ಕರ್ನಾಟಕ ಮೂಲದ, ಉತ್ತರ ಪ್ರದೇಶದ ಗೌತಮ್‌ ಬುದ್ಧ ನಗರದ ಜಿಲ್ಲಾಧಿಕಾರಿ ಸುಹಾಸ್‌ ಯತಿರಾಜ್‌ ಫೈನಲ್‌ ಪ್ರವೇಶಿಸಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್‌ ಪದಕ ಗೆದ್ದ ಮೊದಲ ಐಎಎಸ್‌ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಪ್ಯಾರಾ ಒಲಿಂಪಿಕ್ಸ್ ಬ್ಯಾಡ್ಮಿಂಟನ್ ವಿಭಾಗದಲ್ಲಿ  ಸೆಮಿಫೈನಲ್‌ನಲ್ಲಿ ಇಂಡೋನೇಷ್ಯಾದ ಸೆಟಿಯವಾನ್‌ ಫ್ರೆಡಿ ವಿರುದ್ಧ ಸುಲಭ ಗೆಲುವು ಸಾಧಿಸಿದ್ದ ಸುಹಾಸ್, ಭಾನುವಾರ ಫೈನಲ್‌ನಲ್ಲಿ ಫ್ರಾನ್ಸ್‌ನ ಲುಕಾಸ್‌ ಮಜುರ್‌ ವಿರುದ್ಧ ಸೆಣಸಾಡಿದ್ದರು.