ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ಏಷ್ಯಾನೆಟ್ ನ್ಯೂಸ್ ಜೊತೆ ಸಂತಸ ಹಂಚಿಕೊಂಡ ಮನು ಭಾಕರ್!

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಪದಕ ಖಾತೆ ತೆರೆದಿದೆ. ಶೂಟಿಂಗ್‌ನಲ್ಲಿ ಮು ಭಾಕರ್ ಕಂಚಿನ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಪದಕ ಗೆದ್ದ ಬಳಿಕ ಏಷ್ಯಾನೆಟ್ ನ್ಯೂಸ್ ಜೊತೆ ಮನು ಭಾಕರ್ ಸಂತಸ ಹಂಚಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಪ್ಯಾರಿಸ್(ಜು.28) ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಶೂಟಿಂಗ್ ವಿಭಾಗದಲ್ಲಿ ಭಾರತ ಪದಕ ಗೆದ್ದುಕೊಳ್ಳುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ತಾಂತ್ರಿಕ ಕಾರಣದಿಂದ ಪದಕ ಮಿಸ್ ಮಾಡಿಕೊಂಡಿದ್ದ ಮನು ಭಾಕರ್ ಇದೀಗ ಭಾರತೀಯರ ಕನಸು ನನಸು ಮಾಡಿದ್ದಾರೆ.ಪದಕ ಗೆದ್ದ ಬಳಿಕ ಪ್ಯಾರಿಸ್‌ನಲ್ಲಿ ಏಷ್ಯಾನೆಟ್ ನ್ಯೂಸ್ ಜೊತೆ ಮನು ಭಾಕರ್ ಸಂತಸ ಹಂಚಿಕೊಂಡಿದ್ದಾರೆ. ಪದಕ ಗೆದ್ದಿರುವುದು ಅತೀವ ಸಂತಸವಾಗಿದೆ. ಈ ಬಾರಿ ಭಾರತ ಮತ್ತಷ್ಟು ಪದಕ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ. 

Related Video