Asianet Suvarna News Asianet Suvarna News

2024ರ ಪ್ಯಾರಿಸ್ ಒಲಿಂಪಿಕ್ಸ್‌ನತ್ತ ಕ್ರೀಡಾಭಿಮಾನಿಗಳ ಚಿತ್ತ

Aug 9, 2021, 12:11 PM IST

ಟೋಕಿಯೋ(ಆ.09): ಕೊರೋನಾ ಭೀತಿಯ ನಡುವೆಯೇ 32ನೇ ಆವೃತ್ತಿಯ ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾ ಅತ್ಯಂತ ಯಶಸ್ವಿಯಾಗಿ ಆಯೋಜನೆಗೊಂಡು ಮುಕ್ತಾಯವಾಗಿದೆ. ಭಾರತ 7 ಪದಕ ಗೆಲ್ಲುವುದರೊಂದಿಗೆ ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿದೆ.

ಟೋಕಿಯೋ ಒಲಿಂಪಿಕ್ಸ್‌ನ ಮೊದಲ ದಿನವೇ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದರೆ, ಕೊನೆಯ ದಿನ ನೀರಜ್ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಅತ್ಯಂತ ಯಶಸ್ವಿಯಾಗಿ ಕ್ರೀಡಾಕೂಟವನ್ನು ಮುಗಿಸಿದೆ. ಸಿಂಧು, ರವಿಕುಮಾರ್, ಭಜರಂಗ್ ಪೂನಿಯಾ, ಭಾರತ ಹಾಕಿ ತಂಡ ಪದಕದ ಬೇಟೆಯಾಡಿದೆ.

ಸಯೊನಾರ ಟೋಕಿಯೋ; ಒಲಿಂಪಿಕ್ಸ್‌ಗೆ ಅಧಿಕೃತ ತೆರೆ

ಇನ್ನು ಮೂರು ವರ್ಷಗಳ ಬಳಿಕ ಅಂದರೆ 2024ರಲ್ಲಿ ಒಲಿಂಪಿಕ್ಸ್‌ ಕ್ರೀಡಾಕೂಟವು ಪ್ಯಾರಿಸ್‌ನಲ್ಲಿ ನಡೆಯಲಿದ್ದು, ಎಲ್ಲಾ ಕ್ರೀಡಾಭಿಮಾನಿಗಳ ಪ್ಯಾರಿಸ್‌ ಒಲಿಂಪಿಕ್ಸ್‌ನತ್ತ ನೆಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ