Asianet Suvarna News Asianet Suvarna News

ಟೋಕಿಯೋ ಪ್ಯಾರಾಲಿಂಪಿಕ್ಸ್‌: ಕರ್ನಾಟಕ ಸರ್ಕಾರದಿಂದ ಬಂಪರ್ ಬಹುಮಾನ ಘೋಷಣೆ

ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ರಾಜ್ಯದಿಂದ ಕುಮಾರಿ ಶಕೀನ ಖಾತುನ್ ಹಾಗೂ ನಿರಂಜನ್ ಮುಕುಂದ್ ಆಯ್ಕೆಯಾಗಿದ್ದಾರೆ. ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತೆರಳುವ ಮುನ್ನ ಈ ಇಬ್ಬರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು.

ಬೆಂಗಳೂರು(ಆ.16): ಮುಂಬರುವ ಟೋಕಿಯೋ ಪ್ಯಾರಾಲಿಂಪಿಕ್ಸ್‌ಗೆ ಕರ್ನಾಟಕ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಪ್ಯಾರಾಲಿಂಪಿಕ್ಸ್‌ ನಲ್ಲಿ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ಕ್ರೀಡಾಸಚಿವ ನಾರಾಯಣ ಗೌಡ ಬಂಪರ್ ಬಹುಮಾನ ಘೋಷಿಸಿದ್ದಾರೆ.

ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ರಾಜ್ಯದಿಂದ ಕುಮಾರಿ ಶಕೀನ ಖಾತುನ್ ಹಾಗೂ ನಿರಂಜನ್ ಮುಕುಂದ್ ಆಯ್ಕೆಯಾಗಿದ್ದಾರೆ. ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತೆರಳುವ ಮುನ್ನ ಈ ಇಬ್ಬರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು.ಆಗಸ್ಟ್ 24ರಿಂದ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಆರಂಭವಾಗಲಿದೆ.

ಆಗಸ್ಟ್ 17ರಂದು ಪ್ಯಾರಾಲಿಂಪಿಕ್ಸ್‌ ಕ್ರೀಡಾಳುಗಳ ಜತೆ ಪ್ರಧಾನಿ ಮೋದಿ ಸಂವಾದ

ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದರೆ 5 ಕೋಟಿ ರುಪಾಯಿ, ಬೆಳ್ಳಿ ಪದಕ ಜಯಿಸಿದರೆ 2 ಕೋಟಿ ರುಪಾಯಿ ಹಾಗೂ ಕಂಚಿನ ಪದಕ ಜಯಿಸಿದರೆ 2 ಕೋಟಿ ರುಪಾಯಿ ಬಹುಮಾನ ನೀಡುವುದಾಗಿ ಕ್ರೀಡಾಸಚಿವ ನಾರಾಯಣ ಗೌಡ ಘೋಷಿಸಿದ್ದಾರೆ. ರಾಜ್ಯವನ್ನು ಕ್ರೀಡೆಯಲ್ಲಿ ಉನ್ನತ ಸ್ಥಾನಕ್ಕೆ ತರಬೇಕು, ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ಗೇಮ್‌ ಮಾಡಲು ಸಜ್ಜಾಗುತ್ತಿರುವುದಾಗಿ ಸಚಿವರು ತಿಳಿಸಿದ್ದಾರೆ.

Video Top Stories