ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟ, ಅಡುಗೆ ಸಹಾಯಕಿಗೆ ಗಂಭೀರ ಗಾಯ

ಮಧುಗಿರಿ ತಾಲೂಕಿನ ಪುರವರ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗು ಕುಕ್ಕರ್ ಸ್ಪೋಟಗೊಂಡಿದ್ದು, ಅಡುಗೆ ಸಹಾಯಕಿಗೆ ಗಂಭೀರ ಗಾಯಗಳಾಗಿವೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

Share this Video
  • FB
  • Linkdin
  • Whatsapp

ತುಮಕೂರು: ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟಗೊಂಡು ಅಡುಗೆ ಸಹಾಯಕಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಪುರವರ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಈ ದುರ್ಘಟನೆ ನಡೆದಿದ್ದು ಉಮಾದೇವಿ (52) ಗಂಭೀರ ಗಾಯಗೊಂಡಿದ್ದಾರೆ

ಗುಣಮಟ್ಟದ ಕುಕ್ಕರ್ ಕೊಡದೇ ಇರೋದು ಘಟನೆಗೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೇಲಾಧಿಕಾರಿಗಳಿಂದ ಪ್ರಕರಣವನ್ನ ಮುಚ್ಚಿಹಾಕಲು ಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ.

Related Video