
ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ; ಸ್ಮಾರಕಕ್ಕೆ ವಿಶೇಷ ಪೂಜೆ ಸಲ್ಲಿಸಿದ ಕುಟುಂಬಸ್ಥರು
ನಟ ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಮೈಸೂರು ತಾಲೂಕಿನ ಹಾಲಾಳು ಗ್ರಾಮದ ಬಳಿ ನಿರ್ಮಾಣ ಆಗಿರುವ ಸ್ಮಾರಕ ತೆರಳಿ ಪೂಜೆ ಸಲ್ಲಿಸಿದರು.
ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ ಹಿನ್ನೆಲೆ ಅಭಿಮಾನಿಗಳು ರಕ್ತದಾನ ಶಿಬಿರ ಏರ್ಪಡಿಸಿದ್ದರು. ಸ್ಮಾರಕಕ್ಕೆ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ವಿಷ್ಣುವರ್ಧನ್ ಪರವಾಗಿ ಅಭಿಮಾನಿಗಳು ಘೋಷಣೆ ಕೂಗಿದರು.