
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ಬಿಜೆಪಿ, ಕಾಂಗ್ರೆಸ್‌ಅನ್ನು ಕೊಲೆಗಡುಕ ಸರ್ಕಾರ ಎಂದು ಟೀಕಿಸಿದ್ದು, ಕೊಡಗು ಜಿಲ್ಲೆಯಲ್ಲಿ ಪೊನಣ್ಣ, ತನ್ವೀರ್ ಹಾಗೂ ಮಂಥರ್ ಗೌಡ ವಿರುದ್ಧ ಪ್ರತಿಭಟನೆ ಜೋರಾಗಿದೆ.
ಮಡಿಕೇರಿಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (Vinay Somaiah) ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಡೆತ್‌ನೋಟ್‌ನಲ್ಲಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ ಹಾಗೂ ಮುಖ್ಯಮಂತ್ರಿಯ ಕಾನೂನು ಸಲಹೆಗಾರ (A.S. Ponnanna) ಹೆಸರನ್ನು ಉಲ್ಲೇಖಿಸಿದ್ದಾರೆ.