
ಅಂಬೇಡ್ಕರ್ ಕುರಿತ ಹೇಳಿಕೆಗೆ ಅಮಿತ್ ಶಾ ತಲೆದಂಡವಾಗುತ್ತಾ? ಗೃಹ ಸಚಿವರ ವಿರುದ್ಧ ಕಾಂಗ್ರೆಸ್ ರಣಕಹಳೆ
‘ಇತ್ತೀಚೆಗೆ ಅಂಬೇಡ್ಕರ್ ಜಪ ಫ್ಯಾಶನ್ ಆಗಿದೆ. ಇದರ ಬದಲು ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು’ ಎಂದು ಸಂವಿಧಾನ ಕುರಿತ ಚರ್ಚೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಭಾರಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
ಸಂವಿಧಾನ ಶಿಲ್ಪಿಗೆ ಅಮಿತ್ ಶಾ ಅಗೌರವ ತೋರಿದ್ದಾರೆ. ಅವರು ರಾಜೀನಾಮೆ ನೀಡಬೇಕು. ಅವರು ನೀಡದೇ ಹೋದರೆ ಹಾಗೂ ಅಂಬೇಡ್ಕರರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವವಿದ್ದರೆ ಅವರು ಇಂದೇ ಗೃಹ ಸಚಿವರನ್ನು ವಜಾ ಮಾಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.