ಆಸ್ಪತ್ರೆ ಎದುರೇ ನರಳಾಡಿದ ಗರ್ಭಿಣಿ; ಬಾಗಿಲ ಹೊರಗೆ ಹೆರಿಗೆ!

ವೈದ್ಯರು ಮತ್ತು ಸಿಬ್ಬಂದಿ ಇಲ್ಲದೇ  ವಿಜಯಪುರ ಜಿಲ್ಲೆಯಲ್ಲಿ ಗರ್ಭಿಣಿಯೊಬ್ಬಳು ಆಸ್ಪತ್ರೆ ಹೊರಗಡೆಯೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಬೆಳಗ್ಗೆ ಗರ್ಭಿಣಿಯನ್ನು ಬಳಗಾನೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡುಹೋಗಿದ್ದರು. ಆದರೆ ಅಲ್ಲಿ ವೈದ್ಯರಾಗಲಿ, ಸಿಬ್ಬಂದಿಯಾಗಲಿ ಯಾರೂ ಇರಲಿಲ್ಲ. ಪಾಪ ಗರ್ಭಿಣಿ ಆವರಣದಲ್ಲೇ ನರಳಾಡಿ, ಅಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ.

Share this Video
  • FB
  • Linkdin
  • Whatsapp

ವಿಜಯಪುರ (ಅ.18): ವೈದ್ಯರು ಮತ್ತು ಸಿಬ್ಬಂದಿ ಇಲ್ಲದೇ ವಿಜಯಪುರ ಜಿಲ್ಲೆಯಲ್ಲಿ ಗರ್ಭಿಣಿಯೊಬ್ಬಳು ಆಸ್ಪತ್ರೆ ಹೊರಗಡೆಯೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. 

ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಕುಟುಂಬಸ್ಥರು ಬೆಳಗ್ಗೆ ಗರ್ಭಿಣಿಯನ್ನು ಬಳಗಾನೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡುಹೋಗಿದ್ದರು. ಆದರೆ ಅಲ್ಲಿ ವೈದ್ಯರಾಗಲಿ, ಸಿಬ್ಬಂದಿಯಾಗಲಿ ಯಾರೂ ಇರಲಿಲ್ಲ. ಪಾಪ ಗರ್ಭಿಣಿ ಆವರಣದಲ್ಲೇ ನರಳಾಡುತ್ತಿದ್ದಳು.

ಕೊನೆಗೆ ಸ್ಥಳೀಯ ಮಹಿಳೆಯರೇ ಸೇರಿ ಆಕೆಗೆ ಹೆರಿಗೆ ಮಾಡಿದ್ದಾರೆ. ಆಸ್ಪತ್ರೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದು, ಈ ಹಿಂದೆಯೂ ಈ ರೀತಿ ಆಗಿದೆ ಎಂದು ಹೇಳಿದರು.

Related Video