Asianet Suvarna News Asianet Suvarna News

ಅಂತರಾಷ್ಟ್ರೀಯ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರಿನ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘಟನೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ಸಮಾಜಮುಖಿ ಕೆಲಸಗಳ ಮೂಲಕ ಸಾಧನೆಗೈದ ಮಹಿಳೆಯರಿಗೆ ಗೌರವ ಸಲ್ಲಿಸಲಾಯ್ತು. 
 

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ, ಕಬ್ಬನ್ ಪಾರ್ಕ್ ನಡಿಗೆದಾರರ (Walkers Association) ಸಂಘಟನೆ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಅಂತರಾಷ್ಟ್ರೀಯ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರದಾನಮಾಡಲಾಯಿತು. ಕಾರ್ಯಕ್ರಮದಲ್ಲಿ ಸಮಾಜಮುಖಿ ಕೆಲಸಗಳ ಮೂಲಕ ಸಾಧನೆಗೈದ ಮಹಿಳೆಯರಿಗೆ ಗೌರವ ಸಲ್ಲಿಸಲಾಯಿತು. ಇನ್ನು ಕಾರ್ಯಕ್ರಮವನ್ನು ಸಚಿವ ಡಾ. ಅಶ್ವಥ್ ನಾರಾಯಣ್ ಉದ್ಘಾಟಿಸಿ, ಸಮಾಜಕ್ಕೆ ಕೊಡುಗೆ ನೀಡಿರುವ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡುವುದು  ಹೆಮ್ಮೆಯ ವಿಚಾರ ಎಂದರು. ಕಾರ್ಯಕ್ರಮದಲ್ಲಿ ನಿಮಾನ್ಸ್ ನಿರ್ದೇಶಕರಾದ ಪ್ರತಿಮಾ ಮೂರ್ತಿ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.