
ಆರ್ಟ್ ಆಫ್ ಲಿವಿಂಗ್ ಮಹಿಳಾ ಸಮ್ಮೇಳನ ಉದ್ಘಾಟಿಸಿ ರಾಷ್ಟ್ರಪತಿ ಮುರ್ಮು ಭಾಷಣ
ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ರವರು 10ನೇ ಅಂತರಾಷ್ಟ್ರೀಯ ಮಹಿಳಾ ಸಮ್ಮೇಳನವನ್ನು ಉದ್ಘಾಟಿಸಿ, 50ಕ್ಕೂ ಹೆಚ್ಚು ದೇಶಗಳಿಂದ ಆಗಮಿಸಿದ್ದ 500ಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಪ್ರೇರೇಪಿಸಿದರು.
ಬೆಂಗಳೂರು (ಫೆ.14): ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ರವರು 10ನೇ ಅಂತರಾಷ್ಟ್ರೀಯ ಮಹಿಳಾ ಸಮ್ಮೇಳನವನ್ನು ಉದ್ಘಾಟಿಸಿ, 50ಕ್ಕೂ ಹೆಚ್ಚು ದೇಶಗಳಿಂದ ಆಗಮಿಸಿದ್ದ 500ಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಪ್ರೇರೇಪಿಸಿದರು. ಗುರುದೇವ ಶ್ರೀ ಶ್ರೀ ರವಿಶಂಕರ್ ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಜನರಿಗೆ ಧ್ಯಾನ ಹಾಗೂ ಮಾನವೀಯ ಸೇವೆಗಳ ಮೂಲಕ ಶಾಂತಿಯ ಮಾರ್ಗ ತೋರಿಸಿದ್ದಾರೆ. ತಂತ್ರಜ್ಞಾನದಲ್ಲಿ ಪ್ರಗತಿ ಸಾಧಿಸುತ್ತಿರುವ ಈ ಯುಗದಲ್ಲಿ ಮಾನವೀಯ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಮಹಿಳೆಯರು ದಯೆ ಮತ್ತು ಕನಿಕರದಿಂದ ಮುನ್ನಡೆಯುವ ಕಾರಣ ಅವರ ಪಾತ್ರ ಅತ್ಯಂತ ಪ್ರಮುಖವಾಗಿದೆ. ರಾಷ್ಟ್ರಪತಿ ಅವರು ಮಾನಸಿಕ ಆರೋಗ್ಯದ ಮಹತ್ವವನ್ನು ಪ್ರಸ್ತಾಪಿಸುತ್ತಾ ಹೇಳಿದರು. ನೀವು ಶಾಂತವಾಗಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಪ್ರೋತ್ಸಾಹ ನೀಡುವ ಸುರಕ್ಷಿತ ಸ್ಥಳಗಳನ್ನು ಸೃಷ್ಟಿಸುವ ಮೂಲಕ ಮೌನವನ್ನು ಮುರಿಯಬಹುದು. ಮಾನಸಿಕ ಶಕ್ತಿಯಿಲ್ಲದೆ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದರು ದ್ರೌಪದಿ ಮುರ್ಮು.