ಗರ್ಭಕೋಶಕ್ಕೆ ಕತ್ತರಿ ಪ್ರಕರಣ: ನ್ಯಾಯಕ್ಕಾಗಿ ಮಹಿಳೆಯರ ಪಟ್ಟು
ಗರ್ಭಕೋಶಕ್ಕೆ ಕತ್ತರಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ.ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ
ರಾಣೆಬೆನ್ನೂರಿನ ವಿವಿಧ ಗ್ರಾಮಗಳಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯನಿಂದ ಗರ್ಭಕೋಶ ಕಳೆದುಕೊಂಡ ಮಹಿಳೆಯರು ಹಾವೇರಿ ಜಿಲ್ಲಾಧಿಕಾರಿಯ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದು, ನ್ಯಾಯ ಸಿಗುವವರೆಗೂ ಮನೆಗೆ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ.ನ್ಯಾಯಕ್ಕಾಗಿ ರಾಣಿಬೆನ್ನೂರಿನಿಂದ ಸಿಎಂ ನಿವಾಸಕ್ಕೆ ಪಾದಯಾತ್ರೆಗೆ ಮುಂದಾಗಿದ್ದ ಮಹಿಳೆಯರ ಮನವೊಲಿಸಿ ಪರಿಹಾರ ಕೊಡುತ್ತೇವೆ ಎಂದು ಜಿಲ್ಲಾಡಳಿತ ಹೇಳಿತ್ತು. ಆದರೆ ಇದುವರೆಗೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಧರಣಿ ನಡೆಸಿದ್ದು, ನ್ಯಾಯ ಸಿಗುವವರೆಗೆ ಮನೆಗೆ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ.