Asianet Suvarna News Asianet Suvarna News

ಅಮೆರಿಕದ ಯೋಧರ ಮುಟ್ಟಿದರೆ ಹುಷಾರ್: ತಾಲಿಬಾನ್‌ಗೆ ಬೈಡೆನ್ ಎಚ್ಚರಿಕೆ!

ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ಉಂಟಾಗಿರುವ ಬಿಕ್ಕಟ್ಟು ಹಾಗೂ ಅಮೆರಿಕನ್ನರ ತೆರವು ಕಾರ್ಯಾಚರಣೆಯ ಕುರಿತು ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ತೆರವು ಕಾರ್ಯಾ ಚರಣೆ ಅಮೆರಿಕದ ಇತಿಹಾಸ ದಲ್ಲಿಯೇ ಅತ್ಯಂತ ಕ್ಲಿಷ್ಟಕರ ಕಾರ್ಯಾಚರಣೆಗಳ ಪೈಕಿ ಒಂದೆನಿಸಿದೆ. ಇದರ ಅಂತಿಮ ಫಲಿತಾಂಶ ಏನಾಗಲಿದೆ ಎಂಬುದನ್ನು ಈಗಲೇ ಹೇಳಲು ಆಗದು ಎಂದು ಹೇಳಿದ್ದಾರೆ.

ವಾಷಿಂಗ್ಟನ್(ಆ.21): ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ಉಂಟಾಗಿರುವ ಬಿಕ್ಕಟ್ಟು ಹಾಗೂ ಅಮೆರಿಕನ್ನರ ತೆರವು ಕಾರ್ಯಾಚರಣೆಯ ಕುರಿತು ಮಾತನಾಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ತೆರವು ಕಾರ್ಯಾ ಚರಣೆ ಅಮೆರಿಕದ ಇತಿಹಾಸ ದಲ್ಲಿಯೇ ಅತ್ಯಂತ ಕ್ಲಿಷ್ಟಕರ ಕಾರ್ಯಾಚರಣೆಗಳ ಪೈಕಿ ಒಂದೆನಿಸಿದೆ. ಇದರ ಅಂತಿಮ ಫಲಿತಾಂಶ ಏನಾಗಲಿದೆ ಎಂಬುದನ್ನು ಈಗಲೇ ಹೇಳಲು ಆಗದು ಎಂದು ಹೇಳಿದ್ದಾರೆ.

ಶ್ವೇತಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬೈಡೆನ್, ಅಮೆರಿಕದ ನಾಗರಿಕರು ಮತ್ತು ಮೈತ್ರಿಕೂಟದ ಸದಸ್ಯರನ್ನು ಸುರಕ್ಷಿತವಾಗಿ ತೆರವುಗೊಳಿಸಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೋ ಎಲ್ಲವನ್ನೂ ನಾವು ಮಾಡುತ್ತಿದ್ದೇವೆ. ಅಗತ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ನಮ್ಮ ಪ್ರತಿ ಯೋಧರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಜುಲೈನಿಂದ ಇದುವರೆಗೆ 18 ಸಾವಿರ ಜನರನ್ನು ಏರ್‌ಲಿಫ್‌ಟ್ ಮಾಡಲಾಗಿದೆ. ಆ.14ರಿಂದ 13 ಸಾವಿರ ಜನರನ್ನು ಕರೆತಲಾಗಿದೆ. ಇನ್ನೂ 6 ಸಾವಿರಕ್ಕೂ ಹೆಚ್ಚು ಮಂದಿ ಆಫ್ಘಾನಿಸ್ತಾನದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.

ಅವರೆಲ್ಲರನ್ನೂ ಸುರಕ್ಷಿತವಾಗಿ ವಾಪಸ್ ಕರೆಸಿಕೊಳ್ಳಲಾಗುವುದು. ಆ.31ರ ವರೆಗೂ ತೆರವು ಕಾರ್ಯಾಚರಣೆ ಮುಂದುವರಿಯಲಿದೆ. ಒಂದು ವೇಳೆ ತಾಲಿಬಾನ್ ಉಗ್ರರು ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದರೆ ಅಥವಾ ನಮ್ಮ ಪಡೆಗಳ ಮೇಲೆ ದಾಳಿ ನಡೆಸಿದರೆ ನಾವು ಸುಮ್ಮನಿರುವುದಿಲ್ಲ. ತಾಲಿಬಾನಿಗಳಿಗೆ ತಕ್ಕ ಪ್ರತ್ಯುತ್ತರವನ್ನು ನೀಡಲಾಗುವುದು ಎಂದು ಬೈಡೆನ್ ಎಚ್ಚರಿಕೆ ನೀಡಿದ್ದಾರೆ.