Asianet Suvarna News Asianet Suvarna News

ಚೀನಾದಲ್ಲಿ ಕೈಗಾರಿಕೆಗಳಿಗೆ ಪವರ್‌ಕಟ್, ಎಲೆಕ್ಟ್ರಾನಿಕ್ಸ್‌ ವಸ್ತುಗಳ ಪೂರೈಕೆಯಲ್ಲಿ ಭಾರೀ ವ್ಯತ್ಯಯ

 ಪರಿಸರಕ್ಕೆ ಸಂಬಂಧಿಸಿದ ವಿಶ್ವಸಂಸ್ಥೆಯ ಸಭೆ, ಮುಂದಿನ ವರ್ಷದ ಬೀಜಿಂಗ್‌ ಚಳಿಗಾಲದ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಚೀನಾ, ಪರಿಸರ ಮಾಲಿನ್ಯ ಕಡಿಮೆ ಮಾಡಲು ದೇಶದ ಕೈಗಾರಿಕೆಗಳಿಗೆ ಪೂರೈಸುವ ವಿದ್ಯುತ್‌ ಪೂರೈಕೆ ಕಡಿತಗೊಳಿಸಿದೆ. 

ಬೀಜಿಂಗ್‌ (ಅ. 01): ಪರಿಸರಕ್ಕೆ ಸಂಬಂಧಿಸಿದ ವಿಶ್ವಸಂಸ್ಥೆಯ ಸಭೆ, ಮುಂದಿನ ವರ್ಷದ ಬೀಜಿಂಗ್‌ ಚಳಿಗಾಲದ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಚೀನಾ, ಪರಿಸರ ಮಾಲಿನ್ಯ ಕಡಿಮೆ ಮಾಡಲು ದೇಶದ ಕೈಗಾರಿಕೆಗಳಿಗೆ ಪೂರೈಸುವ ವಿದ್ಯುತ್‌ ಪೂರೈಕೆ ಕಡಿತಗೊಳಿಸಿದೆ. 

ಬ್ರಿಟನ್ ತೈಲ ಬಿಕ್ಕಟ್ಟು: 90 % ಪಂಪ್‌ಗಳು ಖಾಲಿ, ಪೆಟ್ರೋಲ್ ಇಲ್ಲ!

ಇದರಿಂದಾಗಿ ಭಾರತ ಸೇರಿದಂತೆ ಇನ್ನಿತರ ದೇಶಗಳಿಗೆ ಚೀನಾದಿಂದ ಪೂರೈಕೆಯಾಗಬೇಕಿರುವ ಮೊಬೈಲ್‌ ಸೇರಿದಂತೆ ಇನ್ನಿತರ ಎಲೆಕ್ಟ್ರಾನಿಕ್ಸ್‌ ವಸ್ತುಗಳ ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗುವ ಭೀತಿ ಶುರುವಾಗಿದೆ. ಇದೀಗ ದಸರಾ, ದೀಪಾವಳಿ ಮತ್ತು ಕ್ರಿಸ್‌ಮಸ್‌ ಸಂದರ್ಭದಲ್ಲಿ ಅಮೆಜಾನ್‌, ಫ್ಲಿಪ್‌ಕಾರ್ಟ್‌ ಸೇರಿದಂತೆ ಇನ್ನಿತರ ಆನ್‌ಲೈನ್‌ ಮಳಿಗೆಗಳಲ್ಲಿ ಗ್ರಾಹಕರಿಗೆ ಆಫರ್‌ಗಳನ್ನು ನೀಡಲಾಗುತ್ತದೆ.  ಚೀನಾದ ಕೈಗಾರಿಕೆಗಳಿಗೆ ವಿದ್ಯುತ್‌ ಪೂರೈಕೆ ಕಡಿತಗೊಳಿಸಿದ್ದರಿಂದ ಎಲೆಕ್ಟ್ರಾನಿಕ್ಸ್ ವಸ್ತುಗಳ ಕೊರತೆ ಉಂಟಾಗಲಿದೆ.