ನಾನು ಮೋದಿಯವರ ಅಭಿಮಾನಿ, ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವೆ: ಎಲಾನ್‌ ಮಸ್ಕ್‌

ನಾನು ಕೂಡ ಪ್ರಧಾನಿ ಮೋದಿ ಅವರ ಅಭಿಮಾನಿ ಎಂದು ಟ್ವಿಟ್ಟರ್‌ ಮಾಲೀಕ ಎಲಾನ್‌ ಮಸ್ಕ್‌ ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ವಿಟ್ಟರ್‌ ಮಾಲೀಕ ಎಲಾನ್‌ ಮಸ್ಕ್‌ ಭೇಟಿಯಾಗಿದ್ದಾರೆ. ಬಳಿಕ ಮಾತನಾಡಿದ ಅವರು, ನಾನು ಭಾರತದ ಭವಿಷ್ಯದ ಬಗ್ಗೆ ತುಂಬಾ ಉತ್ಸುಕನಾಗಿದ್ದೇನೆ. ನಾನು ಕೂಡ ಪ್ರಧಾನಿ ಮೋದಿ ಅವರ ಅಭಿಮಾನಿ ಎಂದು ಮಸ್ಕ್‌ ಹೇಳಿದ್ದಾರೆ. ಅಲ್ಲದೇ ವಿಶ್ವದ ಬೇರೆಯೆಲ್ಲಾ ದೇಶಗಳಿಗಿಂತ ಭಾರತದ ಮೇಲೆ ನನಗೆ ಭರವಸೆ ಹೆಚ್ಚಿದೆ. ಪ್ರಧಾನಿ ನರೇಂದ್ರ ಮೋದಿಯವರು ನಿಜವಾಗಿಯೂ ಭಾರತದ ಬಗ್ಗೆ ಕಾಳಜಿ ಹೊಂದಿದ್ದಾರೆ. ಯಾಕೆಂದರೆ ಅವರು ಪ್ರತಿಯೊಬ್ಬರಿಗೂ ದೇಶದಲ್ಲಿ ಹೂಡಿಕೆಗೆ ಅವಕಾಶ ಕೊಡುತ್ತಿದ್ದಾರೆ. ನನಗೂ ಕೂಡ ಭಾರತಕ್ ಬರುವಂತೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಅಮೆರಿಕಾಗೆ ತೆರಳಿದ್ದಾರೆ. ಇಲ್ಲಿ ಮಸ್ಕ್‌ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. 

ಇದನ್ನೂ ವೀಕ್ಷಸಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಧಾನಸೌಧದ ಮುಂಭಾಗ ಗಣ್ಯರಿಂದ ಯೋಗಾಭ್ಯಾಸ

Related Video