ಯುದ್ಧದ ಮಾತು ಬಿಟ್ಟು ತಣ್ಣಗಾದ ಚೀನಾ; ಏಕೀ ನಿಲುವು?
ಲಡಾಖ್ ಮತ್ತು ಸಿಕ್ಕಿಂ ಗಡಿಯಲ್ಲಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಯುದ್ಧೋನ್ಮಾದ ಪ್ರದರ್ಶಿಸಿದ್ದ ಚೀನಾ ಇದೀಗ ತನ್ನ ರಾಗ ಬದಲಿಸಿದೆ. ಗಡಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ ಇದ್ದು, ಪರಿಸ್ಥಿತಿ ಇನ್ನೂ ಕೈ ಮೀರಿ ಹೋಗಿಲ್ಲ.
ನವದೆಹಲಿ (ಮೇ. 29): ಲಡಾಖ್ ಮತ್ತು ಸಿಕ್ಕಿಂ ಗಡಿಯಲ್ಲಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಯುದ್ಧೋನ್ಮಾದ ಪ್ರದರ್ಶಿಸಿದ್ದ ಚೀನಾ ಇದೀಗ ತನ್ನ ರಾಗ ಬದಲಿಸಿದೆ. ಗಡಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ ಇದ್ದು, ಪರಿಸ್ಥಿತಿ ಇನ್ನೂ ಕೈ ಮೀರಿ ಹೋಗಿಲ್ಲ.
ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ಚೀನಾದ ವಿದೇಶಾಂಗ ಸಚಿವಾಲಯ ಬುಧವಾರ ಹೇಳಿಕೆ ನೀಡಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ದೇಶದ ಸಾರ್ವಭೌಮತ್ವದ ರಕ್ಷಣೆಗಾಗಿ ಯದ್ಧ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ತಮ್ಮ ಯೋಧರಿಗೆ ಆದೇಶಿಸಿದ ಬೆನ್ನಲ್ಲೇ, ಈ ಹೇಳಿಕೆ ಹೊರಬಿದ್ದಿದೆ.
ಚೀನಾ ಗಡಿ ತಂಟೆಗೆ ಭಾರತ ಸಡ್ಡು: ತತ್ತರಿಸಿದ ಡ್ರ್ಯಾಗನ್!
ಗಡಿಯಲ್ಲಿ ಭಾರೀ ಪ್ರಮಾಣದಲ್ಲಿ ಸೇನೆ ಜಮಾವಣೆ, ಡ್ರೋನ್ ಕಣ್ಗಾವಲಿನ ತನ್ನ ನಿರ್ಧಾರದ ಹೊರತಾಗಿಯೂ, ಭಾರತ ತನ್ನ ಯೋಜನೆ ಮುಂದುವರೆಸುವ ಕಠಿಣ ನಿರ್ಧಾರ ಕೈಗೊಂಡ ಬೆನ್ನಲ್ಲೇ ಚೀನಾ ತಣ್ಣಗಾಗಿರುವುದು ಕಂಡುಬಂದಿದೆ.