ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ 9ನೇ ವರ್ಷದ ಯೋಗದಿನಾಚರಣೆ, 180 ರಾಷ್ಟ್ರದ ಗಣ್ಯರು ಭಾಗಿ!
9ನೇ ವರ್ಷದ ಅಂತಾರಾಷ್ಟ್ರೀಯ ಯೋಗದಿನಾಚರಣೆ ವಿಶ್ವದಲ್ಲೇ ಭಾರಿ ಸದ್ದು ಮಾಡಿದೆ. ನ್ಯೂಯಾರ್ಕ್ ನಗರದ ವಿಶ್ವಸಂಸ್ಥೆ ಆವರಣದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. 180ಕ್ಕೂ ಹೆಚ್ಚು ರಾಷ್ಟ್ರದ ಪ್ರತಿನಿಧಿಗಳು ಪಾಲ್ಗೊಂಡ ಈ ಯೋಗ ದಿನಾಚರಣೆ ಗಿನ್ನಿಸ್ ದಾಖಲೆ ಬರೆದಿದೆ. ಮೋದಿ ಭಾಷಣ, ಯೋಗಾಭ್ಯಾಸ ವಿಡಿಯೋ ಇಲ್ಲಿದೆ.
ನ್ಯೂಯಾರ್ಕ್(ಜೂ.21) ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಲವು ಕಾರಣಗಳಿಂದ ವಿಶ್ವದಲ್ಲೇ ಭಾರಿ ಸಂಚಲನ ಸೃಷ್ಟಿಸಿದೆ. ನ್ಯೂಯಾರ್ಕ್ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಪಾರ ಗಣ್ಯರೊಂದಿಗೆ ಯೋಗ ಮಾಡಿ ಗಮನಸೆಳೆದಿದ್ದಾರೆ. ವಿಶ್ವಸಂಸ್ಥೆ ಆವರಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, 180 ರಾಷ್ಟ್ರಗಳ ಪ್ರತಿನಿಧಿಗಳು, ರಾಯಭಾರಿಗಳು, ನ್ಯೂಯಾರ್ಕ್ ಮೇಯರ್, ವಿಶ್ವಸಂಸ್ಥೆ ಅಧಿಕಾರಿಗಳು, ಅನಿವಾಸಿ ಭಾರತೀಯರ ಜೊತೆ ಯೋಗಾಭ್ಯಾಸ ಮಾಡಿದರು. ಇದಕ್ಕೂ ಮೊದಲು ಮಾತನಾಡಿದ ಮೋದಿ, ಯೋಗದಿಂದ ನಾವೆಲ್ಲಾ ಜೊತೆಯಾಗಿದ್ದೇವೆ. ಯೋಗ ದೈಹಿಕವಾಗಿ, ಮಾನಸಿಕವಾಗಿ ಸದೃಢಗೊಳಿಸುತ್ತಿದೆ. ಯೋಗ ಎಲ್ಲರಿಗೂ ಮುಕ್ತವಾಗಿದೆ ಎಂದರು.