Asianet Suvarna News Asianet Suvarna News

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಗೆ ಮೋದಿ ಅಧ್ಯಕ್ಷತೆ: ಈ ಬಗ್ಗೆ ನಡೆಯುತ್ತೆ ಚರ್ಚೆ!

ದೇಶದ ಇತಿಹಾಸದಲ್ಲಿ ಮೊದಲ ಬಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಅಲಂಕರಿಸಿ ಸಭೆ ನಡೆಸಲಿದ್ದಾರೆ. ಆನ್‌ಲೈನ್‌ ಮೂಲಕ ನಡೆಯುವ ಈ ಸಭೆಯಲ್ಲಿ ಮೋದಿ ಅವರು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಜೊತೆಗೆ ಸಮುದ್ರ ಸುರಕ್ಷತೆಯನ್ನು ಹೆಚ್ಚಿಸುವ ವಿಷಯದ ಕುರಿತು ಸಂವಾದ ನಡೆಸಲಿದ್ದಾರೆ.

ನವದೆಹಲಿ(ಆ.09) ದೇಶದ ಇತಿಹಾಸದಲ್ಲಿ ಮೊದಲ ಬಾರಿ ಭಾರತದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಅಲಂಕರಿಸಿ ಸಭೆ ನಡೆಸಲಿದ್ದಾರೆ. ಆನ್‌ಲೈನ್‌ ಮೂಲಕ ನಡೆಯುವ ಈ ಸಭೆಯಲ್ಲಿ ಮೋದಿ ಅವರು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ಜೊತೆಗೆ ಸಮುದ್ರ ಸುರಕ್ಷತೆಯನ್ನು ಹೆಚ್ಚಿಸುವ ವಿಷಯದ ಕುರಿತು ಸಂವಾದ ನಡೆಸಲಿದ್ದಾರೆ.

ಆಗಸ್ಟ್‌ ತಿಂಗಳು ಪೂರ್ತಿ ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಹೊಂದಿರುತ್ತದೆ. ಆ.9ರಂದು ಮೋದಿ ಈ ಅಧ್ಯಕ್ಷ ಸ್ಥಾನದಿಂದ ಮೊದಲ ಸಭೆ ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ವಿದೇಶಾಂಗ ಸಚಿವರು ಇನ್ನೆರಡು ಸಭೆಗಳನ್ನು ನಡೆಸಲಿದ್ದಾರೆ. ಶಾಂತಿಪಾಲನೆ ಕಾರ್ಯಾಚರಣೆ ಹಾಗೂ ಭಯೋತ್ಪಾದನೆ ನಿಗ್ರಹದ ಕುರಿತು ಆ ಸಭೆಗಳು ನಡೆಯಲಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಗ್ಚಿ ತಿಳಿಸಿದ್ದಾರೆ.

Video Top Stories