Asianet Suvarna News Asianet Suvarna News

ಭಾರತ - ಚೀನಾ ಗಡಿಯಲ್ಲಿ ಯೋಧರ ಸಂಘರ್ಷ: ಗಡಿಯಲ್ಲಿ ನಡೆದಿದ್ದೇನು?

ಪೂರ್ವ ಲಡಾಖ್‌ನ ಗಲ್ವಾನ್ ಗಡಿಯಲ್ಲಿ ಕಳೆದ ಐದು ವಾರಗಳಿಂದ ಬಿಕ್ಕಟ್ಟು ಏರ್ಪಟ್ಟಿದೆ. ಈ ಕುರಿತು ಎರಡೂ ದೇಶಗಳ ನಡುವೆ ಮಾತುಕತೆ ನಡೆದು ಸ್ಥಳದಿಂದ ಹಿಂದೆ ಸರಿಯುವ ಕುರಿತು ಒಮ್ಮತಕ್ಕೆ ಬರಲಾಗಿತ್ತು.. ಅದರಂತೆ ಚೀನಾ ಯೋಧರು ಸೋಮವಾರ ರಾತ್ರಿ ಕಾಲ್ತೆಗೆಯಲು ಆರಂಭಿಸಿದರು. ಈ ಸಂದರ್ಭದಲ್ಲಿ ಏಕಾಏಕಿ ಭಾರತೀಯ ಯೋಧರ ಮೇಲೆ ದೊಣ್ಣೆ, ಕಲ್ಲುಗಳಿಂದ ದಾಳಿ ನಡೆಸಿದರು.  ಗಡಿಯಲ್ಲಿ ನಡೆದಿದ್ದೇನು? ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಇಲ್ಲಿದೆ ನೋಡಿ...! 
 

ನವದೆಹಲಿ (ಜೂ. 17): ಪೂರ್ವ ಲಡಾಖ್‌ನ ಗಲ್ವಾನ್ ಗಡಿಯಲ್ಲಿ ಕಳೆದ ಐದು ವಾರಗಳಿಂದ ಬಿಕ್ಕಟ್ಟು ಏರ್ಪಟ್ಟಿದೆ. ಈ ಕುರಿತು ಎರಡೂ ದೇಶಗಳ ನಡುವೆ ಮಾತುಕತೆ ನಡೆದು ಸ್ಥಳದಿಂದ ಹಿಂದೆ ಸರಿಯುವ ಕುರಿತು ಒಮ್ಮತಕ್ಕೆ ಬರಲಾಗಿತ್ತು.. ಅದರಂತೆ ಚೀನಾ ಯೋಧರು ಸೋಮವಾರ ರಾತ್ರಿ ಕಾಲ್ತೆಗೆಯಲು ಆರಂಭಿಸಿದರು. ಈ ಸಂದರ್ಭದಲ್ಲಿ ಏಕಾಏಕಿ ಭಾರತೀಯ ಯೋಧರ ಮೇಲೆ ದೊಣ್ಣೆ, ಕಲ್ಲುಗಳಿಂದ ದಾಳಿ ನಡೆಸಿದರು.

ತಕ್ಷಣವೇ ಭಾರತೀಯ ಯೋಧರು ಪ್ರತಿದಾಳಿಗೆ ಇಳಿದರು. ಹಲವು ತಾಸುಗಳ ಕಾಲ ಯೋಧರ ನಡುವೆ ಘರ್ಷಣೆ ನಡೆಯಿತು. ಮಧ್ಯರಾತ್ರಿ ಬಳಿಕ ಕಲಹ ನಿಂತಿತು. ಈ ಘರ್ಷಣೆಯಲ್ಲಿ ಭಾರತದ ಕರ್ನಲ್ ಸಂತೋಷ್ ಸೇರಿ ೨೦ ಮಂದಿ ಸಾವನ್ನಪ್ಪಿದ್ದಾರೆ. ಗಡಿಯಲ್ಲಿ ನಡೆದಿದ್ದೇನು? ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಇಲ್ಲಿದೆ ನೋಡಿ...! 


 

Video Top Stories