Asianet Suvarna News Asianet Suvarna News

ಚೀನಾ ಕ್ಯಾತೆಗೆ ಸಡ್ಡು ಹೊಡೆದ ಭಾರತ; ಮೋದಿ ಮಾಸ್ಟರ್ ಪ್ಲಾನ್‌ಗೆ ಚೀನಾ ತತ್ತರ!

ಭಾರತ ತನ್ನ ಭೂಭಾಗದೊಳಗೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನೇ ನೆಪವಾಗಿಟ್ಟುಕೊಂಡು ಗಡಿಯಲ್ಲಿ ಸೇನಾ ಜಮಾವಣೆ ಮಾಡಿ ಬೆದರಿಕೆಯೊಡ್ಡುತ್ತಿರುವ ಚೀನಾಕ್ಕೆ ಸಡ್ಡು ಹೊಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಗಡಿಯುದ್ದಕ್ಕೂ ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡಿದೆಯೋ ಅಲ್ಲೆಲ್ಲಾ ಸಮಬಲ ರೀತಿಯಲ್ಲಿ ಸೈನಿಕರ ನಿಯೋಜನೆ ಮಾಡಲು ಹಾಗೂ ಚೀನಾ ಆಕ್ಷೇಪಿಸುತ್ತಿರುವ ರಸ್ತೆ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ.

ಬೆಂಗಳೂರು (ಮೇ. 27): ಭಾರತ ತನ್ನ ಭೂಭಾಗದೊಳಗೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನೇ ನೆಪವಾಗಿಟ್ಟುಕೊಂಡು ಗಡಿಯಲ್ಲಿ ಸೇನಾ ಜಮಾವಣೆ ಮಾಡಿ ಬೆದರಿಕೆಯೊಡ್ಡುತ್ತಿರುವ ಚೀನಾಕ್ಕೆ ಸಡ್ಡು ಹೊಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಗಡಿಯುದ್ದಕ್ಕೂ ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡಿದೆಯೋ ಅಲ್ಲೆಲ್ಲಾ ಸಮಬಲ ರೀತಿಯಲ್ಲಿ ಸೈನಿಕರ ನಿಯೋಜನೆ ಮಾಡಲು ಹಾಗೂ ಚೀನಾ ಆಕ್ಷೇಪಿಸುತ್ತಿರುವ ರಸ್ತೆ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ.

ಚೀನಾ ಗಡಿ ತಂಟೆಗೆ ಭಾರತ ಸಡ್ಡು: ತತ್ತರಿಸಿದ ಡ್ರ್ಯಾಗನ್!

ಇದರ ಬೆನ್ನಲ್ಲೇ ಗಡಿಯಲ್ಲಿನ ಹಲವು ಭಾಗಗಳಿಗೆ ಭಾರಿ ಸಂಖ್ಯೆಯಲ್ಲಿ ಯೋಧರನ್ನು ರವಾನಿಸಲಾಗಿದೆ. ಗಡಿಯಲ್ಲಿ ಚೀನಿ ಪಡೆಗಳ ಚಲನವಲನದ ಮೇಲೆ ಮೇಲೆ ಕಣ್ಣಿಡಲು ಡ್ರೋನ್‌ ಪಹರೆ ಕೂಡ ಆರಂಭಿಸಲಾಗಿದೆ. ಚೀನಾ ಅತಿ ಎತ್ತರದಿಂದ ನಿಗಾ ಇಡುವ, ದಾಳಿ ಮಾಡುವ ಸಾಮರ್ಥ್ಯ ಹೊಂದಿರುವ ಡ್ರೋನ್‌ ಅನ್ನು ನಿಯೋಜನೆ ಮಾಡಿತ್ತು. ಅದರ ಬೆನ್ನಲ್ಲೇ ಭಾರತ ಕೂಡ ಡ್ರೋನ್‌ ಬಳಕೆ ಮಾಡುತ್ತಿರುವುದು ಮಹತ್ವ ಪಡೆದುಕೊಂಡಿದೆ.