ತಾಲಿಬಾನ್ ತಾಂಡವ: ಶಿಯಾ ಮತ್ತು ಸುನ್ನಿ ಪಂಗಡಗಳ ನಡುವೆ ದ್ವೇಷವೇಕೆ..?
ದಕ್ಷಿಣ ಅಷ್ಘಾನಿಸ್ತಾನದ ಮಸೀದಿಯೊಂದರಲ್ಲಿ ಶಿಯಾ ಮುಸ್ಲಿಂರನ್ನು ಗುರಿಯಾಗಿರಿಸಿಕೊಂಡು ಆತ್ಮಾಹುತಿ ಬಾಂಬರ್‌ಗಳು ಶುಕ್ರವಾರ ನಡೆಸಿದ ದಾಳಿಯಲ್ಲಿ 37 ಜನರು ಮೃತಪಟ್ಟಿದ್ದು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಕಾಬೂಲ್ (ಅ. 20): ದಕ್ಷಿಣ ಅಷ್ಘಾನಿಸ್ತಾನದ ಮಸೀದಿಯೊಂದರಲ್ಲಿ ಶಿಯಾ ಮುಸ್ಲಿಂರನ್ನು ಗುರಿಯಾಗಿರಿಸಿಕೊಂಡು ಆತ್ಮಾಹುತಿ ಬಾಂಬರ್‌ಗಳು ಶುಕ್ರವಾರ ನಡೆಸಿದ ದಾಳಿಯಲ್ಲಿ 37 ಜನರು ಮೃತಪಟ್ಟಿದ್ದು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇದು ಶಿಯಾ ವರ್ಸಸ್ ಸುನ್ನಿ ಸಂಘರ್ಷಕ್ಕೆ ಕಾರಣವಾಗಿದೆ. ಇದು ಆರಂಭವಷ್ಟೇ, ಮುಂದಿನ ದಿನಗಳಲ್ಲಿ ಇನ್ನಷ್ಟು ಭೀಭತ್ಸ ಕೃತ್ಯಗಳು ನಡೆಯಲಿದೆ ಎಂದು ಉಗ್ರರು ಹೇಳಿದ್ದಾರೆ.
ಶುಕ್ರವಾರದ ಪ್ರಾರ್ಥನೆಗಾಗಿ ಜನರು ಮಸೀದಿಯಲ್ಲಿ ಸೇರಿದ್ದ ಸಮಯದಲ್ಲಿ ದುಷ್ಕರ್ಮಿಗಳು ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ.