ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ರಾಜನಾಥ್ ಸಿಂಗ್

ಭಾರತ ಚೀನಾ- ಗಡಿಯಲ್ಲಿ  ಸಂಘರ್ಷ ತಾರಕಕ್ಕೇರಿದೆ. ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಉಭಯ ದೇಶಗಳ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ ಕರ್ನಲ್ ಸಮೇತ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ. 

First Published Jun 17, 2020, 3:42 PM IST | Last Updated Jun 17, 2020, 3:42 PM IST

ನವದೆಹಲಿ (ಜೂ. 17): ಭಾರತ ಚೀನಾ- ಗಡಿಯಲ್ಲಿ  ಸಂಘರ್ಷ ತಾರಕಕ್ಕೇರಿದೆ. ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಉಭಯ ದೇಶಗಳ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಭಾರತದ ಕರ್ನಲ್ ಸಮೇತ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ. 

ಚೀನಿ ಸೈನಿಕರ ಸಾವಿನ ಬಗ್ಗೆ ಯಾವುದೇ ಖಚಿತ ಮಾಹಿತಿಯಿಲ್ಲ..!

ಗಾಲ್ವಾನ್ ಸಂಘರ್ಷದ ಬಗ್ಗೆ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಯೋದರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಚೀನಾ ದೇಶಕ್ಕೆ ತಕ್ಕ ಪಾಠ ಕಲಿಸುತ್ತೇವೆ. ಗ್ಯಾಲ್ವನ್‌ನಲ್ಲಿ ನಮ್ಮ ಯೋಧರು ಹುತಾತ್ಮರಾಗಿದ್ದು ನೋವಿನ ಸಂಗತಿ' ಎಂದಿದ್ದಾರೆ.