ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ಪ್ರಯಾಣಿಕರ ದಟ್ಟಣೆ ನಿವಾರಿಸಲು, ನೈಋತ್ಯ ರೈಲ್ವೆಯು ಎಸ್ಎಂವಿಟಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು (06245/06246) ಸೇವೆಯನ್ನು ಆರಂಭಿಸಿದೆ.
ಬೆಂಗಳೂರು: ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ವೇಳೆ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಎಸ್ಎಂವಿಟಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸೇವೆ ಕಲ್ಪಿಸಿದೆ.
ಎಸ್ಎಂವಿಟಿ ಬೆಂಗಳೂರು-ವಿಜಯಪುರ- ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್
ಎಸ್ಎಂವಿಟಿ ಬೆಂಗಳೂರು-ವಿಜಯಪುರ- ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು 06245/06246 (2 ಟ್ರಿಪ್) ಸಂಚರಿಸಲಿದೆ. ಎಸ್ಎಂವಿಟಿ ಬೆಂಗಳೂರು - ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಜ. 13 ಮತ್ತು ಜ. 23 ರಂದು ರಾತ್ರಿ 7.15 ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ವಿಜಯಪುರ ತಲುಪುತ್ತದೆ (2 ಟ್ರಿಪ್).
ವಿಜಯಪುರ - ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಜ.18 ಮತ್ತು ಜ. 26 (ಸೋಮವಾರ) ರಂದು ಸಂಜೆ 5.30 ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣವನ್ನು ತಲುಪುತ್ತದೆ. (2 ಟ್ರಿಪ್)
ಇದನ್ನೂ ಓದಿ: ಬೆಂಗಳೂರಿನಿಂದ ಕೇವಲ 60 ಕಿ.ಮೀ ದೂರದಲ್ಲಿ ಜಲಸಾಹಸ ಕ್ರೀಡೆ; ವಿವಿಧ ವಾಟರ್ ಬೋಟ್ ಲಭ್ಯ
ಎಲ್ಲೆಲ್ಲಿ ನಿಲುಗಡೆ?
ಈ ರೈಲುಗಳಿಗೆ (06245/46) ಬಾಣಸವಾಡಿ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಒದಗಿಸಲಾಗಿದೆ. ಈ ರೈಲು 22 ಬೋಗಿ ಒಳಗೊಂಡಿರುತ್ತದೆ. ಅವುಗಳಲ್ಲಿ 2 ಎಸಿ 2 ಟೈರ್, 3 ಎಸಿ 3 ಟೈರ್, 11 ಸ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.
ಇದನ್ನೂ ಓದಿ: ಸಂಕ್ರಾಂತಿ ಪ್ರಯಾಣಕ್ಕೆ ಬಂತು ಎರಡು ವಿಶೇಷ ರೈಲು: ಯಶವಂತಪುರ To ತಾಳಗುಪ್ಪ ಎಕ್ಸ್‌ಪ್ರೆಸ್
