Asianet Suvarna News

ತಾಳಿಕೋಟೆ ಬಳಿ ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ಇಬ್ಬರ ಸಾವು

ಚಲಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ| ಇಬ್ಬರ ಸಾವು|  ತಾಳಿಕೋಟೆ ಪಟ್ಟಣದ ಹೊರವಲಯದಲ್ಲಿ ನಡೆದ ದುರ್ಘಟನೆ| ಮೃತರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ  ಅಗ್ನಿ ಗ್ರಾಮದವರಾಗಿದ್ದಾರೆ|

Tractor, Bike Accident in Talikoti in Vijayapura District: Two People Dead
Author
Bengaluru, First Published Nov 13, 2019, 9:54 AM IST
  • Facebook
  • Twitter
  • Whatsapp

ವಿಜಯಪುರ[ನ.13]: ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ  ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ತಾಳಿಕೋಟೆ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ. 

ಮೃತರನ್ನು ಮಿಣಜಗಿ (38) ಭೀಮಣ್ಣ ಹುಲಿಮನಿ (42 ) ಎಂದು ಗುರುತಿಸಲಾಗಿದೆ. ಮೃತರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ  ಅಗ್ನಿ ಗ್ರಾಮದವರು ಎಂದು ತಿಳಿದು ಬಂದಿದೆ. ಚಲಿಸುತ್ತಿದ್ದ ಟ್ರ್ಯಾಕ್ಟರ್ ಗೆ  ಹಿಂಬದಿಯಿಂದ ಬೈಕ್ ಡಿಕ್ಕಿ  ಹೊಡೆದಿದ್ದರಿಂದ ಓರ್ವ ಬೈಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆ ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Follow Us:
Download App:
  • android
  • ios