Cricket
ಚೊಚ್ಚಲ ಆವೃತ್ತಿಯಿಂದಲೂ ಐಪಿಎಲ್ ಆಡುತ್ತಾ ಬಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ 17 ಆವೃತ್ತಿಗಳನ್ನು ಆಡಿಯೂ ಐಪಿಎಲ್ ಕಪ್ ಗೆಲ್ಲಲು ಸಾಧ್ಯವಾಗಿಲ್ಲ.
ಕಳೆದ ಸೀಸನ್‌ನಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು ಪ್ಲೇ ಆಫ್ ಪ್ರವೇಶಿಸಿತ್ತಾದರೂ, ಎಲಿಮಿನೇಟರ್ ಪಂದ್ಯದಲ್ಲೇ ಆಘಾತಕಾರಿ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿತ್ತು.
ಈ ಬಾರಿ ಆರ್‌ಸಿಬಿ ತಂಡವು ಹೊಸ ನಾಯಕನೊಂದಿಗೆ ಟೂರ್ನಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಆರ್‌ಸಿಬಿ ನಾಯಕರಾಗಲು 4 ಆಟಗಾರರು ರೆಡಿ ಇದ್ದಾರೆ.
ಅನುಭವಿ ವೇಗಿ ಭುವಿ ದೇಶಿ ಕ್ರಿಕೆಟ್‌ನಲ್ಲಿ ತಂಡವನ್ನು ಮುನ್ನಡೆಸಿದ ಅನುಭವವಿದ್ದು, ಆರ್‌ಸಿಬಿ ನಾಯಕರಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
ಆರ್‌ಸಿಬಿ ತಂಡದ ಪ್ರತಿಭಾನ್ವಿತ ಬ್ಯಾಟರ್ ಪಾಟೀದಾರ್‌ಗೆ ಉತ್ತಮ ನಾಯಕತ್ವದ ಗುಣಗಳಿದ್ದು, ಆರ್‌ಸಿಬಿ ನೂತನ ನಾಯಕರಾಗುವ ಸಾಧ್ಯತೆಯಿದೆ.
ಇಂಗ್ಲೆಂಡ್ ಮೂಲದ ಸ್ಪೋಟಕ ಬ್ಯಾಟರ್ ಫಿಲ್ ಸಾಲ್ಟ್ ಅವರಿಗೆ ಆರ್‌ಸಿಬಿ ಫ್ರಾಂಚೈಸಿ ನಾಯಕತ್ವ ಪಟ್ಟ ಕಟ್ಟಿದರೂ ಅಚ್ಚರಿಯಿಲ್ಲ.
ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೊಮ್ಮೆ ಬೆಂಗಳೂರು ತಂಡದ ನಾಯಕರಾಗುವ ಸಾಧ್ಯತೆ ದಟ್ಟವಾಗಿದೆ.