ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಭರ್ಜರಿಯಾಗಿಯೇ ಶುಭಾರಂಭ ಮಾಡಿದೆ.
ಮೊದಲು ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಭಾರತ ಇದಾದ ಬಳಿಕ ಬ್ಯಾಟಿಂಗ್‌ನಲ್ಲೂ ಜವಾಬ್ದಾರಿಯುತ ಆಟವಾಡುವ ಮೂಲಕ ಮೊದಲ ಪಂದ್ಯ ಜಯಿಸಿದೆ.
ಇನ್ನು 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಬಳಿಕ ಮೊದಲ ಐಸಿಸಿ ಟೂರ್ನಿಯಲ್ಲಿ ಪಾಲ್ಗೊಂಡ ಅನುಭವಿ ವೇಗಿ ಮೊಹಮ್ಮದ್ ಶಮಿ, ಮೊದಲ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ಮಿಂಚಿದರು.
ತಾವೆಸೆದ ಮೊದಲ ಓವರ್‌ನಲ್ಲೇ ವಿಕೆಟ್ ಖಾತೆ ತೆರೆದ ಶಮಿ, ಪವರ್ ಪ್ಲೇ ಹಾಗೂ ಡೆತ್ ಓವರ್‌ಗಳಲ್ಲಿ ಮಾರಕ ದಾಳಿ ನಡೆಸಿ 5 ವಿಕೆಟ್ ಗೊಂಚಲು ತಮ್ಮದಾಗಿಸಿಕೊಂಡರು.
5 ವಿಕೆಟ್ ಕಬಳಿಸುತ್ತಿದ್ದಂತೆಯೇ ಶಮಿ ಆಕಾಶದತ್ತ ಮುಖ ಮಾಡಿ ಫ್ಲೈಯಿಂಗ್ ಕಿಸ್ ಕೊಟ್ಟು ಸಂಭ್ರಮಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಮಿ, 'ನಾನು ಫ್ಲೈಯಿಂಗ್ ಕಿಸ್ ಕೊಟ್ಟಿದ್ದು ನಮ್ಮ ತಂದೆಗೆ. ಯಾಕೆಂದರೆ ಅವರೇ ನನಗೆ ಸ್ಪೂರ್ತಿ' ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ ಶಮಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಅತಿವೇಗವಾಗಿ 200 ವಿಕೆಟ್ ಕಬಳಿಸಿದ ಭಾರತದ ಮೊದಲ ಹಾಗೂ ಒಟ್ಟಾರೆ ಎರಡನೇ ಬೌಲರ್ ಎನಿಸಿಕೊಂಡರು.
ಗಾಯದ ಸಮಸ್ಯೆ ಹಾಗೂ ಕೌಟುಂಬಿಕ ಸಮಸ್ಯೆಯ ಹೊರತಾಗಿಯೂ ಶಮಿ ಅವಕಾಶ ಸಿಕ್ಕಾಗಲೆಲ್ಲಾ ಅಮೋಘ ಪ್ರದರ್ಶನ ತೋರುವ ಮೂಲಕ ಟೀಂ ಇಂಡಿಯಾಗೆ ಆಸರೆಯಾಗಿದ್ದಾರೆ.
ಅಧಿಕೃತವಾಗಿ ಮುರಿದುಬಿದ್ದ ಚಹಲ್-ಧನಶ್ರೀ ದಾಂಪತ್ಯ ಬದುಕು!
ಮೊಹಮ್ಮದ್ ಶಮಿ ಇಷ್ಟಪಡುವ ಐಷಾರಾಮಿ ಕಾರು, ಬೆಲೆ ಕೇಳಿ ಬೆಚ್ಚಿ ಬೀಳ್ತೀರಿ!
ಐಸಿಸಿ ಟೂರ್ನಿಯಲ್ಲಿ ಬಾಂಗ್ಲಾ ಎದುರು ರೋಹಿತ್ ಬ್ಯಾಟಿಂಗ್ ಪ್ರದರ್ಶನ ಹೇಗಿದೆ?
ಸ್ಮೃತಿ ಮಂಧನಾ ಬಳಿ 4 ಐಷಾರಾಮಿ ಕಾರುಗಳು, ಬೆಲೆ ಬಲು ದುಬಾರಿ!