ಯುವರಾಜ್ ಸಿಂಗ್ 2007ರ ಟಿ20 ವಿಶ್ವಕಪ್ ಹಾಗೂ 2011ರ ಐಸಿಸಿ ಏಕದಿನ ವಿಶ್ವಕಪ್ ಗೆಲುವಿನ ರೂವಾರಿ ಎನಿಸಿದ್ದಾರೆ.
2000ನೇ ಇಸವಿಯಲ್ಲಿ ಎಡಗೈ ಬ್ಯಾಟರ್ ಯುವರಾಜ್ ಸಿಂಗ್ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು.
ಒಂದೂವರೆ ದಶಕಗಳ ಕಾಲ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಯುವಿ, ಹಲವಾರು ಬಾರಿ ಏಕಾಂಗಿಯಾಗಿ ಭಾರತಕ್ಕೆ ಗೆಲುವು ತಂದು ಕೊಟ್ಟಿದ್ದಾರೆ.
2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್‌ಗೆ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿದ್ದು ಯಾರೂ ಮರೆಯಲು ಸಾಧ್ಯವಿಲ್ಲ
ಇನ್ನು 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಯುವಿ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ಭಾರತ 28 ವರ್ಷಗಳ ಬಳಿಕ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
2011ರ ಏಕದಿನ ವಿಶ್ವಕಪ್‌ನಲ್ಲಿ ಯುವಿ ಬ್ಯಾಟಿಂಗ್‌ನಲ್ಲಿ 362 ರನ್ ಹಾಗೂ ಬೌಲಿಂಗ್‌ನಲ್ಲಿ 15 ವಿಕೆಟ್ ಕಬಳಿಸಿದ್ದರು
2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಯುವಿ ಆಲ್ರೌಂಡ್ ಆಟಕ್ಕೆ ಸರಣಿಶ್ರೇಷ್ಠ ಪ್ರಶಸ್ತಿಯೂ ಸಿಕ್ಕಿತ್ತು.
2019ರಲ್ಲಿ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ಯುವಿ ಅವರಿಗೆ ಬಿಸಿಸಿಐನಿಂದ ಪ್ರತಿ ತಿಂಗಳು 60,000 ರುಪಾಯಿ ಪೆನ್ಷನ್ ಪಡೆಯುತ್ತಿದ್ದಾರೆ.
ಯುವರಾಜ್ ಸಿಂಗ್, ಭಾರತ ಪರ 40 ಟೆಸ್ಟ್, 304 ಏಕದಿನ ಹಾಗೂ 58 ಟಿ20 ಪಂದ್ಯಗಳನ್ನಾಡಿದ್ದಾರೆ.
40 ಟೆಸ್ಟ್‌ನಿಂದ 1900 ರನ್, ಏಕದಿನ ಕ್ರಿಕೆಟ್‌ನಲ್ಲಿ 8701 ಹಾಗೂ ಟಿ20 ಕ್ರಿಕೆಟ್‌ನಿಂದ 1177 ರನ್ ಸಿಡಿಸಿದ್ದಾರೆ.
ಇದಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬೌಲಿಂಗ್‌ನಲ್ಲಿ ಒಟ್ಟಾರೆ ಯುವಿ 150 ಬಲಿ ಪಡೆದಿದ್ದಾರೆ.
ಯುವರಾಜ್ ಸಿಂಗ್ ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ ಮಣಿಸುವ ಮೂಲಕ ಹಲವು ಕ್ಯಾನ್ಸರ್ ಪೀಡಿತರ ಪಾಲಿಗೆ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ
ಸೂರ್ಯಕುಮಾರ್ ಯಾದವ್ ಫಿಟ್ನೆಸ್ ಸೀಕ್ರೇಟ್ಸ್ ಕೊನೆಗೂ ಬಹಿರಂಗ
ವೀರೇಂದ್ರ ಸೆಹ್ವಾಗ್ ಪತ್ನಿ ಆರತಿ ನಿಜವಾದ ಅಪ್ಸರೆ! ಇಲ್ಲಿವೆ ಫೋಟೋಗಳು
ಸಿರಾಜ್‌ರಂತೆ DSP ಆಗಿ ಅಧಿಕಾರ ಸ್ವೀಕರಿಸಿದ ಈ ಸ್ಟಾರ್ ಕ್ರಿಕೆಟರ್!
ಮತ್ಸ್ಯ ಕನ್ಯೆಯಂತೆ ಕಾಣುವ ಸಾರಾ ತೆಂಡೂಲ್ಕರ್ ಬೀಚ್ ಫೋಟೋಗಳು ವೈರಲ್