ವೆಸ್ಟ್ ಇಂಡೀಸ್ ಎದುರು ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿರುವ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700 ವಿಕೆಟ್ ಕಬಳಿಸಿದ್ದಾರೆ.
cricket-sports Jul 13 2023
Author: Naveen Kodase Image Credits:Instagram
Kannada
ಮೊದಲ ದಿನವೇ ದಾಖಲೆ
ಡೊಮಿನಿಕಾದ ವಿಂಡ್ಸರ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ದಿನದಲ್ಲೇ ಅಶ್ವಿನ್ 3ನೇ ವಿಕೆಟ್ ಕಬಳಿಸುವ ಮೂಲಕ 700 ವಿಕೆಟ್ ಸಾಧನೆ ಮಾಡಿದ್ದಾರೆ.
Image credits: Getty
Kannada
ಎಲೈಟ್ ಕ್ಲಬ್ ಸೇರ್ಪಡೆ
ಈ ಮೂಲಕ ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಭಾರತದ ಮೂರನೇ ಹಾಗೂ ಒಟ್ಟಾರೆ 16ನೇ ಬೌಲರ್ ಎನ್ನುವ ಕೀರ್ತಿಗೆ ಅಶ್ವಿನ್ ಪಾತ್ರರಾಗಿದ್ದಾರೆ
Image credits: Getty
Kannada
ಮೂರು ಮಾದರಿಯಲ್ಲೂ ವಿಕೆಟ್ ಭೇಟೆ
ರವಿಚಂದ್ರನ್ ಅಶ್ವಿನ್ ಇದುವರೆಗೂ ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ 479, ಏಕದಿನ ಕ್ರಿಕೆಟ್‌ನಲ್ಲಿ 151 ಹಾಗೂ ಟಿ20 ಕ್ರಿಕೆಟ್‌ನಲ್ಲಿ 72 ವಿಕೆಟ್ ಕಬಳಿಸಿದ್ದಾರೆ.
Image credits: Instagram
Kannada
ಟೆಸ್ಟ್ ವಿಶ್ವಕಪ್‌ಗಿಲ್ಲ ಸ್ಥಾನ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಭಾರತದ ಆಡುವ ಹನ್ನೊಂದರ ಬಳಗದಿಂದ ಅಶ್ವಿನ್ ಅವರನ್ನು ಕೈಬಿಡಲಾಗಿತ್ತು. ಇದೀಗ ವಿಂಡೀಸ್ ಎದುರು 5 ವಿಕೆಟ್ ಪಡೆದು ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ.
Image credits: Instagram
Kannada
ತಂದೆ-ಮಗನ ಬಲಿ ಪಡೆದ ಅಶ್ವಿನ್
ತೇಜ್‌ನಾರಾಯಣ್ ವಿಕೆಟ್ ಕಬಳಿಸುವ ಮೂಲಕ ಅಶ್ವಿನ್, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತಂದೆ ಹಾಗೂ ಮಗನ ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನ್ನುವ ಹೆಗ್ಗಳಿಕೆ ಪಾತ್ರರಾಗಿದ್ದರು.
Image credits: Getty
Kannada
ಗರಿಷ್ಠ ವಿಕೆಟ್ ಕಬಳಿಸಿದ ಭಾರತೀಯರು
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಭಾರತೀಯರು:
ಇನ್ನು ರವಿಚಂದ್ರನ್ ಅಶ್ವಿನ್ ಕೇವಲ 6 ವಿಕೆಟ್ ಕಬಳಿಸಿದರೆ, ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಲಿದ್ದಾರೆ. ಇದೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಈ ಸಾಧನೆ ಮಾಡಿದರೆ, ಅಚ್ಚರಿಯಿಲ್ಲ.