Cricket
ಭಾರತ-ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಜುಲೈ 12ರಿಂದ ಆರಂಭವಾಗಲಿದೆ.
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ದವೇ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.
ವೆಸ್ಟ್ ಇಂಡೀಸ್ ವಿರುದ್ದ ಕೆರಿಬಿಯನ್ ನಾಡಿನಲ್ಲಿ ವಿರಾಟ್ ಕೊಹ್ಲಿ 9 ಟೆಸ್ಟ್ ಪಂದ್ಯಗಳನ್ನಾಡಿ 463 ರನ್ ಬಾರಿಸಿದ್ದಾರೆ.
ವೆಸ್ಟ್ ಇಂಡೀಸ್‌ನಲ್ಲಿ ವಿರಾಟ್ ಕೊಹ್ಲಿ ಒಟ್ಟಾರೆ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ 30 ಪಂದ್ಯಗಳನ್ನಾಡಿ 1400 ರನ್ ಬಾರಿಸಿದ್ದಾರೆ.
ವೆಸ್ಟ್ ಇಂಡೀಸ್‌ನಲ್ಲಿ ವಿರಾಟ್ ಬ್ಯಾಟಿಂಗ್ ಸರಾಸರಿ 46.66 ಆಗಿದ್ದು, ಗರಿಷ್ಠ ವೈಯುಕ್ತಿಕ ಸ್ಕೋರ್ 200 ರನ್ ಬಾರಿಸಿದ್ದಾರೆ.
ವೆಸ್ಟ್ ಇಂಡೀಸ್‌ನಲ್ಲಿ ವಿರಾಟ್ ಕೊಹ್ಲಿ ಇದುವರೆಗೂ 5 ಶತಕ ಹಾಗೂ 6 ಅರ್ಧಶತಕ ಸಿಡಿಸಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ದ ಭಾರತ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನು ಆಡಲಿದ್ದು, ವಿರಾಟ್ ಕೊಹ್ಲಿ ಟೆಸ್ಟ್ ಮತ್ತು ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇನ್ನು ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡವು ಇದೇ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಟೂರ್ನಿಗೆ ಅರ್ಹತೆಗಿಟ್ಟಿಸಲು ವಿಫಲವಾಗಿದೆ.
2023ರ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ನವೆಂಬರ್ 19ರ ವರೆಗೆ ಭಾರತದಲ್ಲಿ ನಡೆಯಲಿದೆ.